ADVERTISEMENT

Karnataka Budget 2025: ಅಬಕಾರಿ ಇಲಾಖೆಗೆ ₹ 40,000 ಕೋಟಿ ಸಂಗ್ರಹಿಸುವ ಗುರಿ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2025, 11:21 IST
Last Updated 7 ಮಾರ್ಚ್ 2025, 11:21 IST
<div class="paragraphs"><p>ವಿಧಾನಸೌಧದ ಹೊರಗೆ ಬಜೆಟ್ ಪ್ರತಿ ಪ್ರದರ್ಶಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ</p></div>

ವಿಧಾನಸೌಧದ ಹೊರಗೆ ಬಜೆಟ್ ಪ್ರತಿ ಪ್ರದರ್ಶಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

   

ಪ್ರಜಾವಾಣಿ ಚಿತ್ರ: ಎಂ. ಎಸ್. ಮಂಜುನಾಥ್

ಬೆಂಗಳೂರು: 2025–26ನೇ ಸಾಲಿನ ಕರ್ನಾಟಕ ಬಜೆಟ್‌ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಶುಕ್ರವಾರ, ಮಾರ್ಚ್‌ 7) ಮಂಡಿಸಿದ್ದಾರೆ.

ADVERTISEMENT

₹ 4.09 ಲಕ್ಷ ಕೋಟಿ ಗಾತ್ರದ ಆಯವ್ಯಯ ಇದಾಗಿದ್ದು, ಇದರೊಂದಿಗೆ, ರಾಜ್ಯ ಬಜೆಟ್‌ ಗಾತ್ರ ಇದೇ ಮೊದಲ ಬಾರಿಗೆ ₹ 4 ಲಕ್ಷ ಕೋಟಿ ಗಡಿ ದಾಟಿದಂತಾಗಿದೆ.

ತಮ್ಮ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು 'ಉಚಿತ ಕೊಡುಗೆಯಲ್ಲ, ಆರ್ಥಿಕ-ಸಾಮಾಜಿಕ ತತ್ವದ ಹೂಡಿಕೆಗಳು' ಎಂದು ಪ್ರತಿಪಾದಿಸಿರುವ ಸಿದ್ದರಾಮಯ್ಯ, ಈ ಯೋಜನೆಗಳಿಗಾಗಿ ₹ 51,034 ಕೋಟಿ ಅನುದಾನ ಮೀಸಲಿಟ್ಟಿದ್ದಾರೆ. ಅದೇರೀತಿ, ವಿವಿಧ ಅಭಿವೃದ್ಧಿ ಕಾರ್ಯಗಳಿಗಾಗಿ ಬಂಡವಾಳ ಕ್ರೋಢೀಕರಣಕ್ಕೆ ಕಸರತ್ತು ನಡೆಸಿರುವ ಮುಖ್ಯಮಂತ್ರಿ, 2025-26ನೇ ಸಾಲಿನಲ್ಲಿ ₹ 40,000 ಕೋಟಿ  ಸಂಗ್ರಹಿಸುವ ಗುರಿಯನ್ನು ಅಬಕಾರಿ ಇಲಾಖೆಗೆ ನೀಡಿದ್ದಾರೆ.

ಅಬಕಾರಿಗೆ ಸಂಬಂಧಿಸಿದ ಪ್ರಮುಖ ಘೋಷಣೆಗಳು

  • ಪ್ರೀಮಿಯಂ ಮದ್ಯದ ಬೆಲೆಯನ್ನು ನೆರೆ ರಾಜ್ಯಗಳಲ್ಲಿ ವಿಧಿಸುತ್ತಿರುವ ಬೆಲೆಗಳಿಗೆ ಅನುಗುಣವಾಗಿ ಪರಿಷ್ಕರಿಸಲಾಗಿದೆ. ಅದನ್ನು 2025-26ರಲ್ಲಿಯೂ ಮುಂದುವರಿಸಲಾಗುವುದು.

  • ಲಭ್ಯವಿರುವ ಮದ್ಯದ ಪರವಾನಗಿಗಳನ್ನು ಇ–ಹರಾಜು ಮೂಲಕ ಪಾರದರ್ಶಕವಾಗಿ ಹಂಚಿಕೆ ಮಾಡಲಾಗುವುದು. ಇದರಿಂದ ಹೆಚ್ಚುವರಿ ರಾಜಸ್ವ ಸಂಗ್ರಹಣೆಯಾಗುವ ನಿರೀಕ್ಷೆ ಇದೆ.

  • ಅಬಕಾರಿ ಇಲಾಖೆಯ ಎಲ್ಲಾ ಸೇವೆಗಳಿಗೆ ಆನ್‌ಲೈನ್ ವ್ಯವಸ್ಥೆ ಜಾರಿ ಮಾಡಲಾಗಿದೆ. ಇದರಿಂದ ಆಡಳಿತದಲ್ಲಿ ದಕ್ಷತೆ ಹೆಚ್ಚಲಿದ್ದು, ಸಾರ್ವಜನಿಕ ಸೇವೆಯನ್ನು ಸುಧಾರಿಸಲು ಸಹಕಾರಿಯಾಗಲಿದೆ.

  • 2024-25ರ ಪರಿಷ್ಕೃತ ಅಂದಾಜಿನಲ್ಲಿ ಅಬಕಾರಿ ತೆರಿಗೆಯಿಂದ ಒಟ್ಟು ₹ 36,500 ಕೋಟಿ ರಾಜಸ್ವವನ್ನು ನಿರೀಕ್ಷಿಸಲಾಗಿದೆ.

  • 2025-26ನೇ ಸಾಲಿಗೆ ₹ 40,000 ಕೋಟಿ ಸಂಗ್ರಹಣಾ ಗುರಿಯನ್ನು ಅಬಕಾರಿ ಇಲಾಖೆಗೆ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.