ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳಿಗೆ ಸಿಕ್ಕಿದ್ದೇನು? ಎಂಬುದರ ಚಿತ್ರಣ ಇಲ್ಲಿದೆ.
ಕರ್ನಾಟಕ ಅನುಸೂಚಿತ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಯಡಿ 2025-26ನೇ ಸಾಲಿನಲ್ಲಿ ಒಟ್ಟಾರೆ ₹42,018 ಕೋಟಿ ಅನುದಾನ ನಿಗದಿ. ಪರಿಶಿಷ್ಟ ಜಾತಿ ಉಪಯೋಜನೆಗೆ ₹29,992 ಕೋಟಿ ಹಾಗೂ ಬುಡಕಟ್ಟು ಉಪಯೋಜನೆಗೆ ₹12,026 ಕೋಟಿ ಆಯವ್ಯಯ ನಿಗದಿ.
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಪ್ರವರ್ಗ-1, 2A ಮತ್ತು 2B ಗುತ್ತಿಗೆದಾರರಿಗೆ ಕಾಮಗಾರಿಗಳಲ್ಲಿ ಪ್ರಸ್ತುತ ನೀಡಲಾಗುತ್ತಿರುವ ಮೀಸಲಾತಿ ₹2 ಕೋಟಿಗೆ ಹೆಚ್ಚಳ. ₹1 ಕೋಟಿ ವರೆಗಿನ ಸರಕು ಖರೀದಿ ಮತ್ತು ಸೇವೆಗಳನ್ನು ಪಡೆಯಲು ಸಹ ಈ ಮೀಸಲಾತಿ ಸೌಲಭ್ಯ ವಿಸ್ತರಣೆ.
ಪ್ರಗತಿ ಕಾಲೋನಿ ಯೋಜನೆಯಡಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ₹222 ಕೋಟಿ. ಅನುದಾನ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಒಟ್ಟು 31 ವಸತಿ ಶಾಲೆಗಳನ್ನು ಪಿ.ಯು ಕಾಲೇಜನ್ನಾಗಿ ಉನ್ನತೀಕರಣ.
26 ಹೋಬಳಿಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಹೊಸ ವಸತಿ ಶಾಲೆಗಳ ಪ್ರಾರಂಭ.
ಒಟ್ಟು 61 ಕ್ರೈಸ್ ವಸತಿ ಶಾಲೆಗಳಿಗೆ 1,292 ಕೋಟಿ ರೂ. ವೆಚ್ಚದಲ್ಲಿ ಸ್ವಂತ ಕಟ್ಟಡ ಹಾಗೂ 213 ಕೋಟಿ ರೂ. ವೆಚ್ಚದಲ್ಲಿ ಕ್ರೈಸ್ ವಸತಿ ಶಾಲೆಗಳಿಗೆ ಶೈಕ್ಷಣಿಕ ಮೂಲಸೌಕರ್ಯ.
34 ವಿದ್ಯಾರ್ಥಿನಿಲಯಗಳಿಗೆ 238 ಕೋಟಿ ರೂ. ವೆಚ್ಚದಲ್ಲಿ ಸ್ವಂತ ಕಟ್ಟಡ ನಿರ್ಮಾಣ.
ಸಮಾಜ ಕಲ್ಯಾಣ ಇಲಾಖೆಯಡಿ ಬರುವ ನಿಗಮಗಳಿಗೆ 2025-26 ನೇ ಸಾಲಿನಲ್ಲಿ ₹488 ಕೋಟಿ ಅನುದಾನ ನಿಗದಿ.
ದೇಶದ ಪ್ರತಿಷ್ಠಿತ 100 ಶಿಕ್ಷಣ ಸಂಸ್ಥೆಗಳಲ್ಲಿ ಪದವಿ/ ಸ್ನಾತಕೋತ್ತರ ಪದವಿ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಬೆಂಬಲ ನೀಡಲು ಪ್ರೋತ್ಸಾಹಧನ.
ಸರ್ಕಾರಿ ಹಾಗೂ ಖಾಸಗಿ ಮೆಡಿಕಲ್ ಮತ್ತು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದು, ಅದೇ ಹಾಸ್ಟೆಲಿನಲ್ಲಿ ಪ್ರವೇಶ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಮಾಸಿಕ ₹3,500 ನೆರವು.
78 ಬುಡಕಟ್ಟು ವಸತಿ ಶಾಲೆಗಳಲ್ಲಿ 7ನೇ ತರಗತಿ ಪ್ರಾರಂಭ. ಐದು ವಸತಿ ಶಾಲೆಗಳು 12ನೇ ತರಗತಿಯವರೆಗೆ ಮೇಲ್ದರ್ಜೆಗೆ.
ಪರಿಶಿಷ್ಟ ಪಂಗಡದ 20 ಹೊಸ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರಾರಂಭ.
ಲ್ಯಾಂಪ್ಸ್ (LAMPS) ಸಹಕಾರ ಸಂಘಗಳಿಗೆ ದುಡಿಯುವ ಬಂಡವಾಳ ರೂಪದಲ್ಲಿ ತಲಾ ₹5 ಲಕ್ಷ ಸಹಾಯಧನ
ಅರಣ್ಯ, ಅರಣ್ಯದಂಚಿನ ಹಾಡಿಗಳಲ್ಲಿ ವಾಸ ಮಾಡುತ್ತಿರುವ ಮೂಲಸೌಕರ್ಯ ವಂಚಿತ ಬುಡಕಟ್ಟುಗಳ ಜನಾಂಗದವರಿಗೆ ಮೂಲಸೌಕರ್ಯಗಳನ್ನು ಒದಗಿಸಲು ₹200 ಕೋಟಿ.
ರಾಜ್ಯ ಸಿವಿಲ್ ಸೇವೆಗಳಲ್ಲಿ ಅರಣ್ಯ, ಅರಣ್ಯದಂಚಿನ ಹಾಡಿಗಳಲ್ಲಿ ವಾಸ ಮಾಡುತ್ತಿರುವ 13 ಬುಡಕಟ್ಟು ಜನಾಂಗಗಳ ಅಭ್ಯರ್ಥಿಗಳ ವಿಶೇಷ ನೇರ ನೇಮಕಾತಿಗೆ ಕ್ರಮ
ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಮೂಲಸೌಕರ್ಯಕ್ಕೆ ₹50 ಕೋಟಿ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ನಿಗಮಗಳಿಗೆ ₹422 ಕೋಟಿ ಅನುದಾನ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 30 ಮೆಟ್ರಿಕ್-ನಂತರದ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣಕ್ಕೆ ಕ್ರಮ.
ಹಿಂದುಳಿದ ವರ್ಗಗಳ ನಿಗಮಗಳ ಮೂಲಕ ನಿರುದ್ಯೋಗಿಗಳಿಗೆ ವಿದ್ಯುತ್ ಚಾಲಿತ ನಾಲ್ಕು ಚಕ್ರಗಳ ವಾಹನದಲ್ಲಿ, ಆಹಾರ ಕಿಯೋಸ್ಕ್ ಪ್ರಾರಂಭಿಸಲು ತಲಾ ₹3 ಲಕ್ಷ ವರೆಗೆ ಸಹಾಯಧನ ಸೌಲಭ್ಯ.
ಅತ್ಯಂತ ಹಿಂದುಳಿದ 46 ಅಲೆಮಾರಿ ಅರೆಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗಾಗಿ ನಾಲ್ಕು ಕಂದಾಯ ವಿಭಾಗಗಳಲ್ಲಿ ತಲಾ ಒಂದರಂತೆ ಡಿ.ದೇವರಾಜ ಅರಸು ವಸತಿ ಶಾಲೆಗಳ ಪ್ರಾರಂಭ.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರಾಧಿಕಾರದ ವತಿಯಿಂದ ಸಂಗೊಳ್ಳಿ ಮತ್ತು ನಂದಗಡದಲ್ಲಿ ₹28 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿ.
ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜುಗಳ ವಿದ್ಯಾರ್ಥಿಗಳಿಗೆ 62 ಹೊಸ ಮೆಟ್ರಿಕ್ ನಂತರದ ವಸತಿನಿಲಯಗಳನ್ನು ಪ್ರಾರಂಭಿಸಲು ₹15 ಕೋಟಿ.
ವಿದ್ಯಾರ್ಥಿ ನಿಲಯಗಳ ಕಟ್ಟಡಗಳ ರಿಪೇರಿ/ದುರಸ್ತಿ ಮಾಡಲು ₹25 ಕೋಟಿ.
ಹಿಂದುಳಿದ ವರ್ಗಗಳಿಗೆ ಸೇರಿದ ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗದವರ ಕಾಲೋನಿಗಳ ಸಮಗ್ರ ಅಭಿವೃದ್ಧಿಗಾಗಿ ₹100 ಕೋಟಿ ಅನುದಾನ.
IAS, IPS, KAS, KSPS ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ನೀಡಲು ಬೆಂಗಳೂರಿನಲ್ಲಿ ಎರಡು ಸುಸಜ್ಜಿತ ವಸತಿ ನಿಲಯ ನಿರ್ಮಾಣ.
ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯಲ್ಲಿ ಹಿಂದುಳಿದ ವರ್ಗಗಳ ಪ್ರವರ್ಗ-1 ಮತ್ತು ಪ್ರವರ್ಗ-2ಎ ಸಮುದಾಯಗಳಿಗೆ ಪ್ರತಿ ಕೈಗಾರಿಕಾ ಪ್ರದೇಶದ ಹಂಚಿಕೆಯಲ್ಲಿ ಶೇ.20ರಷ್ಟು ಭೂಮಿ ಮೀಸಲು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.