ADVERTISEMENT

karnataka budget| ರಾಜ್ಯ ಬಜೆಟ್‌ನಲ್ಲಿ ಕುಟುಂಬ ಕಲ್ಯಾಣಕ್ಕೆ ಸಿಕ್ಕಿದ್ದೇನು?

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2020, 11:31 IST
Last Updated 5 ಮಾರ್ಚ್ 2020, 11:31 IST
ಕುಟುಂಬ ಕಲ್ಯಾಣ ಇಲಾಖೆಯಿಂದ ಆಯೋಜಿಸಲಾಗಿದ್ದ ಯೋಗ ಕಾರ್ಯಕ್ರಮ (ಸಾಂದರ್ಭಿಕ ಚಿತ್ರ)
ಕುಟುಂಬ ಕಲ್ಯಾಣ ಇಲಾಖೆಯಿಂದ ಆಯೋಜಿಸಲಾಗಿದ್ದ ಯೋಗ ಕಾರ್ಯಕ್ರಮ (ಸಾಂದರ್ಭಿಕ ಚಿತ್ರ)   

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಜನಾಂಗ, ಹಿಂದೂಳಿದ, ಅಲ್ಪಸಂಖ್ಯಾತ ಸಮುದಾಯಗಳ ಕಲ್ಯಾಣಕ್ಕೆ ಬಿಎಸ್‌ವೈ ಹಲವು ಯೋಜನೆಗಳನ್ನು ರಾಜ್ಯ ಬಜೆಟ್‌ ಮಂಡನೆ ವೇಳೆ ಘೋಷಿಸಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ತರಬೇತಿ, ಸರ್ಟಿಫಿಕೇಟ್ ಕೋರ್ಸುಗಳು, ಅಲೆಮಾರಿ ಸಮುದಾಯಗಳ ಸಮಗ್ರ ಅಭಿವೃದ್ಧಿ, ಕ್ರೈಸ್ತ ಸಮುದಾಯದವರ ಸರ್ವತೋಮುಖ ಅಭಿವೃದ್ಧಿಗೆ 200 ಕೋಟಿ ರೂ. ಅನುದಾನ ನೀಡುವ ಬಗ್ಗೆ ಯಡಿಯೂರಪ್ಪ ಮಾತನಾಡಿದ್ದಾರೆ.

ಕುಟುಂಬ ಕಲ್ಯಾಣಕ್ಕೆ ಸಂಬಂಧಿಸಿದಂತೆ ಬಜೆಟ್‌ ಪ್ರಮುಖಾಂಶಗಳು

ADVERTISEMENT

* ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದವರ ಕಲ್ಯಾಣಕ್ಕೆ ಎಸ್‍ಸಿಎಸ್‍ಪಿ/ ಟಿಎಸ್‍ಪಿ ಅಡಿ 26,930 ಕೋಟಿ ರೂ. ಅನುದಾನ ನಿಗದಿ. ಇದು ನಿಯಮಾನುಸಾರ ಹಂಚಿಕೆ ಮಾಡಬೇಕಾದ ಮೊತ್ತಕ್ಕಿಂತ ಹೆಚ್ಚಾಗಿದೆ.

* ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ/ಯುವತಿಯರಿಗೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಮೂಲಕ ವಾಹನ ಚಾಲನಾ ತರಬೇತಿ, ವಿವಿಧ ಪ್ಯಾರಾಮೆಡಿಕಲ್ ಸರ್ಟಿಫಿಕೇಟ್ ಕೋರ್ಸುಗಳೊಂದಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಹಾಗೂ ಸಣ್ಣ ಸರಕು ಸಾಗಾಣಿಕೆ ವಾಹನ ಖರೀದಿಗೆ ಸಾಲದ ಸೌಲಭ್ಯ ನೀಡಲು ಕ್ರಮ.

* ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ನಿರ್ವಹಿಸುತ್ತಿರುವ ಸಹಕಾರ ಸಂಘಗಳಿಗೆ ಆರ್ಥಿಕ ಚಟುವಟಿಕೆಗಳಿಗಾಗಿ ನೀಡುವ ಷೇರು ಬಂಡವಾಳ ದ್ವಿಗುಣಗೊಳಿಸಿ 20 ಲಕ್ಷ ರೂ. ಗಳಿಗೆ ಹೆಚ್ಚಳ.

* ಚರ್ಮ ಶಿಲ್ಪ ಎಂಬ ಯಂತ್ರಾಧಾರಿತ ಉತ್ಪಾದನಾ ಘಟಕಗಳ ಸ್ಥಾಪನೆಗೆ 250 ಚರ್ಮ ಕುಶಲಕರ್ಮಿಗಳಿಗೆ ಡಾ. ಬಾಬು ಜಗಜೀವನ್‍ರಾಮ್ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ಮೂಲಕ ಘಟಕ ವೆಚ್ಚ 10 ಲಕ್ಷ ರೂ.ಗಳಲ್ಲಿ ಐದು ಲಕ್ಷ ರೂ. ಸಹಾಯಧನ. 12.50 ಕೋಟಿ ರೂ. ಅನುದಾನ.

* ಅಲೆಮಾರಿ/ಅರೆ ಅಲೆಮಾರಿ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ 78 ಕೋಟಿ ರೂ. ಅನುದಾನ.

* ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಹಾಗೂ ವಿವಿಧ ನಿಗಮಗಳಿಗೆ 125 ಕೋಟಿ ರೂ. ಅನುದಾನ.

* ಇ-ವಾಣಿಜ್ಯ ಉತ್ಪನ್ನಗಳನ್ನು ಸರಬರಾಜು ಮಾಡುವ ಯುವಕರಿಗೆ ಬೈಕ್ ಕೊಳ್ಳಲು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಸಾವಿರ ಯುವಕರಿಗೆ ತಲಾ 25,000 ರೂ.ಗಳಂತೆ 2.5 ಕೋಟಿ ರೂ. ಆರ್ಥಿಕ ನೆರವು

* ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಿರುವ ಅಧಿಸೂಚಿತವಲ್ಲದ ಕೊಳಚೆ ಪ್ರದೇಶಗಳ ಅಭಿವೃದ್ಧಿಗೆ 200 ಕೋಟಿ ರೂ. ಅನುದಾನ

* ಕ್ರೈಸ್ತ ಸಮುದಾಯದವರ ಸರ್ವತೋಮುಖ ಅಭಿವೃದ್ಧಿಗೆ 200 ಕೋಟಿ ರೂ. ಅನುದಾನ.

* ಅಪೂರ್ಣ ಹಂತದ ಎರಡು ಲಕ್ಷ ಮನೆಗಳನ್ನು ಪೂರ್ಣಗೊಳಿಸಿ, ವಸತಿ ರಹಿತರಿಗೆ ಹಂಚಿಕೆ ಮಾಡಲು 2500 ಕೋಟಿ ರೂ.

* ಸರ್ಕಾರದ ವಸತಿ ಯೋಜನೆಗಳಡಿ ಮನೆಗಳನ್ನು ನಿರ್ಮಿಸಿಕೊಂಡು ಹತ್ತು ವರ್ಷವಾಗಿದ್ದಲ್ಲಿ, ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಅಡಮಾನವಿಡಲಾದ ನಿವೇಶನವನ್ನು ಡೀಮ್ಡ್ ರಿಲೀಸ್ ಎಂದು ಪರಿಗಣಿಸಲು ಕ್ರಮ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.