ADVERTISEMENT

ನಕ್ಸಲ್ ಮುಕ್ತ ಕರ್ನಾಟಕ, ನಕ್ಸಲ್ ನಿಗ್ರಹ ಪಡೆ ವಿಸರ್ಜನೆ: ಸಿಎಂ ಘೋಷಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಮಾರ್ಚ್ 2025, 11:14 IST
Last Updated 7 ಮಾರ್ಚ್ 2025, 11:14 IST
   

ಬೆಂಗಳೂರು: ಆರು ನಕ್ಸಲರು ಶರಣರಾಗುವುದರೊಂದಿಗೆ ರಾಜ್ಯವು ನಕ್ಸಲ್‌ ಮುಕ್ತವಾಗಿದೆ. ಹಾಗಾಗಿ ನಕ್ಸಲ್ ನಿಗ್ರಹ ಪಡೆಯನ್ನು ವಿಸರ್ಜನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಶರಣಾಗಿರುವ ನಕ್ಸಲರನ್ನು ಸಮಾಜದ ಮುಖ್ಯವಾಹಿನಿಗೆ ಸೇರ್ಪಡೆಗೊಳಿಸಲು ಹಾಗೂ ನಕ್ಸಲ್ ಬಾಧಿತ ಪ್ರದೇಶಗಳಲ್ಲಿ ಮೂಲಸೌಕರ್ಯ ಒದಗಿಸಲು ₹ 10 ಕೋಟಿ ವೆಚ್ಚದ ವಿಶೇಷ ಪ್ಯಾಕೇಜ್ ರೂಪಿಸಲಾಗುತ್ತದೆ ಎಂದು ಪ್ರಕಟಿಸಿದರು.

ರಾಜ್ಯದಲ್ಲಿ ಪ್ರಸ್ತುತ 5 ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರಸಕ್ತ ವರ್ಷದಿಂದ ಬಳ್ಳಾರಿ, ದಾವಣಗೆರೆ, ಮೈಸೂರು ಮತ್ತು ಬೆಂಗಳೂರು ಕೇಂದ್ರ ವಲಯಗಳಲ್ಲಿ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳಗಳ ಸ್ಥಾಪನೆಗೆ ಒತ್ತು ನೀಡಲಾಗಿದೆ.

ADVERTISEMENT

ನಂದಿ ಬೆಟ್ಟದ ಕೂಡುಗುರ್ಕಿ ಮತ್ತು ಕೆಜಿಎಫ್ ಬಳಿ ಎರಡು ಭಾರತೀಯ ಮೀಸಲು ಪೊಲೀಸ್ ಪಡೆಗಳನ್ನು (ಐಆರ್ ಬಿ) ಸ್ಥಾಪಿಸಲು ಬಜೆಟ್‌ನಲ್ಲಿ ₹80 ಕೋಟಿ ಅನುದಾನ ಒದಗಿಸಲಾಗಿದೆ. ಪೊಲೀಸ್‌ ವಸತಿ ಗೃಹಗಳ ನಿರ್ಮಾಣಕ್ಕೆ 2025-26ನೇ ಸಾಲಿಗೆ ₹300 ಕೋಟಿ ಹಾಗೂ ಪೊಲೀಸ್ ಸಿಬ್ಬಂದಿಗೆ ಆರೋಗ್ಯ ತಪಾಸಣೆಗೆ ನೀಡುತ್ತಿರುವ ಮೊತ್ತವನ್ನು ₹1 ಸಾವಿರದಿಂದ ₹1,500ಕ್ಕೆ ಹೆಚ್ಚಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.