ADVERTISEMENT

ಅಮೆರಿಕದ ಅಧ್ಯಕ್ಷರು ಭಾರತದ ಬಜೆಟ್ ಮಂಡಿಸುತ್ತಾರೆಯೇ? ಪ್ರಿಯಾಂಕ್ ಪ್ರಶ್ನೆ

ಪಿಟಿಐ
Published 1 ಫೆಬ್ರುವರಿ 2026, 9:05 IST
Last Updated 1 ಫೆಬ್ರುವರಿ 2026, 9:05 IST
ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ   

ಬೆಂಗಳೂರು: ಇರಾನ್ ಬದಲಿಗೆ ಭಾರತವು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಗೆ ಸಂಬಂಧಿಸಿ ಕೇಂದ್ರ ಸರ್ಕಾರವನ್ನು ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪ್ರಿಯಾಂಕ್ ಖರ್ಗೆ ಪೋಸ್ಟ್ ಮಾಡಿದ್ದಾರೆ.

'ಮುಂದೇನು, ಅಮೆರಿಕದ ಅಧ್ಯಕ್ಷರು ಭಾರತದ ಬಜೆಟ್ ಅನ್ನು ಸಹ ಮಂಡಿಸುತ್ತಾರೆಯೇ?' ಎಂದು ಪ್ರಶ್ನಿಸಿದ್ದಾರೆ.

ADVERTISEMENT

ನ್ಯೂಯಾರ್ಕ್‌ನಲ್ಲಿ ಏರ್ ಫೋರ್ಸ್ ಒನ್ ವಿಮಾನದಲ್ಲಿ ಮಾತನಾಡಿದ್ದ ಟ್ರಂಪ್, 'ತೈಲ ಖರೀದಿಗೆ ನಾವು ಚೀನಾವನ್ನು ಸ್ವಾಗತಿಸುತ್ತೇವೆ. ಅದರಿಂದ ಹೆಚ್ಚಿನ ಲಾಭ ಗಳಿಸಬಹುದು. ನಾವು ಈಗಾಗಲೇ ಒಪ್ಪಂದವನ್ನು ಮಾಡಿಕೊಂಡಿದ್ದೇವೆ. ಭಾರತ ಕೂಡ ಬರುತ್ತಿದೆ. ಅದು ಇರಾನ್ ಬದಲು ವೆನೆಜುವೆಲಾದಿಂದ ತೈಲವನ್ನು ಖರೀದಿಸಲಿದೆ. ಆದ್ದರಿಂದ ನಾವು ಈಗಾಗಲೇ ಒಪ್ಪಂದವನ್ನೂ ಮಾಡಿಕೊಂಡಿದ್ದೇವೆ' ಎಂದು ಹೇಳಿದ್ದಾರೆ.

ಟ್ರಂಪ್ ಹೇಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ನಮ್ಮ ಸರ್ಕಾರ ಏನೇ ಮಾಡಿದರೂ ಅಮೆರಿಕದ ಸರ್ಕಾರವು ಮಾಹಿತಿ ನೀಡಲಿದೆ ಎಂದು ಕಾಂಗ್ರೆಸ್ ಟೀಕಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.