ಸಾಂಕೇತಿಕ ಚಿತ್ರ
ನವದೆಹಲಿ: ಜಾಮೀನು ಪಡೆಯಲು ಸಾಧ್ಯವಾಗದೆ ಜೈಲಿನಲ್ಲಿಯೇ ಕಾಲಕಳೆಯುತ್ತಿರುವ ಕೈದಿಗಳಿಗೆ ಆರ್ಥಿಕ ನೆರವು ನೀಡಲು ಕೇಂದ್ರವು 2025-26ರ ಬಜೆಟ್‌ನಲ್ಲಿ ₹5 ಕೋಟಿ ಮೀಸಲಿಟ್ಟಿದೆ.
'ಮಾದರಿ ಕಾರಾಗೃಹಗಳು ಮತ್ತು ತಿದ್ದುಪಡಿ ಸೇವೆಗಳ ಕಾಯಿದೆ' 2023ರ ಅಡಿಯಲ್ಲಿ, ರಾಜ್ಯ ಕಾನೂನು ಸೇವೆಗಳ ಅಧಿಕಾರಿಗಳು ಅಗತ್ಯವಿರುವ ವ್ಯಕ್ತಿಗಳಿಗೆ ಉಚಿತ ಕಾನೂನು ನೆರವು ನೀಡಲು ಜೈಲುಗಳಲ್ಲಿ ಕಾನೂನು ಸೇವಾ ಕ್ಲಿನಿಕ್‌ಗಳನ್ನು ಸ್ಥಾಪಿಸಲಾಗಿದೆ.
ಇಂದು 2025–26ನೇ ಸಾಲಿನ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ ಅವರು, ದಂಡ ಅಥವಾ ಜಾಮೀನು ಮೊತ್ತವನ್ನು ಭರಿಸಲಾಗದ ಕೈದಿಗಳಿಗೆ ಸಹಾಯ ಮಾಡಲು ₹5 ಕೋಟಿ ಮೀಸಲಿಡಲಾಗಿದೆ ಎಂದು ಹೇಳಿದ್ದಾರೆ. ಕೇಂದ್ರವು ಹಿಂದಿನ ಬಜೆಟ್‌ನಲ್ಲಿ ₹20 ಕೋಟಿ ಮೀಸಲಿಟ್ಟಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.