ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2025-26 ಸಾಲಿನ ಬಜೆಟ್ ಅನ್ನು ನಿರ್ಮಲಾ ಸೀತಾರಾಮನ್ ಅವರು ಇಂದು (ಶನಿವಾರ) ಮಂಡಿಸಿದ್ದಾರೆ.
‘ಸಕ್ಷಮ್ ಅಂಗನವಾಡಿ ಮತ್ತು ಪೋಷಣ್ 2.0’ ಯೋಜನೆಯಡಿಯಲ್ಲಿ ದೇಶದಾದ್ಯಂತ ಸುಮಾರು 8 ಕೋಟಿಗೂ ಹೆಚ್ಚು ಮಕ್ಕಳು, 1 ಕೋಟಿ ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರಿಗೆ ಹಾಗೂ ಈಶಾನ್ಯ ಪ್ರದೇಶದ ಸುಮಾರು 20 ಲಕ್ಷ ಹದಿಹರೆಯದ ಹುಡುಗಿಯರಿಗೆ ಉತ್ತಮ ಗುಣಮಟ್ಟದ ಪೌಷ್ಟಿಕಾಂಶಯುಕ್ತ ಆಹಾರ ಒದಗಿಸಲಾಗುವುದು ಎಂದು ವಿತ್ತ ಸಚಿವೆ ಘೋಷಿಸಿದ್ದಾರೆ
ಯೋಜನೆಯ ವೆಚ್ಚದ ಮಾನದಂಡವನ್ನು ಸೂಕ್ತವಾಗಿ ಹೆಚ್ಚಿಸಲಾಗುವುದು ಎಂದು ಸೀತಾರಾಮನ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.