ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021–22ನೇ ಹಣಕಾಸು ವರ್ಷದ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಇದೇ ಮೊದಲ ಬಾರಿಗೆ ಕಾಗದರಹಿತ ಬಜೆಟ್ ಮಂಡಿಸಲಾಗುತ್ತಿದೆ.
ದೇಶದೊಳಗಿನ ಅಥವಾ ದೇಶದ ಪ್ರದೇಶಗಳ ಮೇಲೆ ಸಂಭವಿಸಿರಬಹುದಾದ ವಿಪತ್ತುಗಳ ದೃಷ್ಟಿಯಿಂದ ನೋಡಿದರೆ ಹಿಂದೆಂದೂ ಕಂಡಿರದಂತಹ ಪರಿಸ್ಥಿತಿಯಲ್ಲಿ ಈ ಬಾರಿ ಬಜೆಟ್ ಸಿದ್ಧಪಡಿಸಲಾಗಿದೆ. ಆದಾಗ್ಯೂ, 2020ರ ಕೊನೆವರೆಗೂ ನಾವು ಕೋವಿಡ್–19 ಸಾಂಕ್ರಾಮಿಕವನ್ನು ಎದುರಿಸಿದ್ದೇವೆ ಎಂದು ಬಜೆಟ್ ಮಂಡನೆಯ ಆರಂಭದಲ್ಲಿ ನಿರ್ಮಲಾ ಸೀತಾರಾಮನ್ ಹೇಳಿದರು.
2020ರ ಮೇ ತಿಂಗಳಲ್ಲಿ ಸರ್ಕಾರವು ‘ಆತ್ಮನಿರ್ಭರ್ ಭಾರತ್’ ಪ್ಯಾಕೇಜ್ ಘೋಷಿಸಿತು. ಆರ್‌ಬಿಐ ಕೈಗೊಂಡಿರುವ ಕ್ರಮಗಳೂ ಸೇರಿ ಎಲ್ಲ ಹಣಕಾಸು ಕ್ರಮಗಳ ಮೊತ್ತ ಅಂದಾಜು ₹27.1 ಲಕ್ಷ ಕೋಟಿ ಆಗಿದೆ ಎಂದು ಸಚಿವೆ ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.