ADVERTISEMENT

Union budget 2022 Live | ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್‌ನ ಪರಿಚಯ ಇಲ್ಲಿದೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2022-23ನೇ ಸಾಲಿನ ಬಜೆಟ್ ಅನ್ನು ಮಂಡನೆ ಮಾಡಿದ್ದಾರೆ.ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕಾವೇರಿ–ಪೆನ್ನಾರ್ ನದಿ ಜೋಡಣೆಗೆ ಒಪ್ಪಿಗೆ ಸೂಚಿಸಲಾಗಿದೆ. 75 ಜಿಲ್ಲೆಗಳಲ್ಲಿ ಡಿಜಿಟಲ್ ಬ್ಯಾಂಕಿಂಗ್, ಡಿಜಿಟಲ್ ಕರೆನ್ಸಿ, ಈ ವರ್ಷದಿಂದಲೇ 5ಜಿ ಜಾರಿ ಮಾಡಲು ನಿರ್ಧರಿಸಲಾಗಿದೆ. ಸಹಕಾರ ಸಂಘಗಳ ತೆರಿಗೆ ದರ ಶೇ.15ಕ್ಕೆ ಇಳಿಕೆ ಮಾಡಲಾಗಿದೆ.

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2022, 9:08 IST
Last Updated 1 ಫೆಬ್ರುವರಿ 2022, 9:08 IST

ಕೇಂದ್ರ ಬಜೆಟ್‌ನಲ್ಲಿ ಡಿಜಿಟಲ್ ಯೂನಿವರ್ಸಿಟಿ ಘೋಷಣೆ: ಏನಿದರ ಅರ್ಥ? #UnionBudget

Union Budget 2022: ಕೇಂದ್ರ ಬಜೆಟ್‌ನಲ್ಲಿ ಯಾವುದು ಇಳಿಕೆ? ಯಾವುದು ಏರಿಕೆ?

ಮಾನಸಿಕ ಆರೋಗ್ಯ ಸಮಾಲೋಚನೆಗಾಗಿ ರಾಷ್ಟ್ರೀಯ ಟೆಲಿ-ಮೆಂಟಲ್ ಆರೋಗ್ಯ ಕಾರ್ಯಕ್ರಮ

ಮಾನಸಿಕ ಆರೋಗ್ಯ ಸಮಾಲೋಚನೆಗಾಗಿ ರಾಷ್ಟ್ರೀಯ ಟೆಲಿ-ಮೆಂಟಲ್ ಆರೋಗ್ಯ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು ಎಂದು ಹೇಳಿದರು. ಐಐಟಿ ಬೆಂಗಳೂರು ಕಾರ್ಯಕ್ರಮಕ್ಕೆ ತಾಂತ್ರಿಕ ಬೆಂಬಲವನ್ನು ನೀಡುತ್ತದೆ.

ರಾಷ್ಟ್ರೀಯ ಡಿಜಿಟಲ್ ಆರೋಗ್ಯ ಪರಿಸರ ವ್ಯವಸ್ಥೆಗಾಗಿ ಮುಕ್ತ ವೇದಿಕೆಯನ್ನು ಹೊರತರಲಾಗುವುದು ಎಂದು ಅವರು ಹೇಳಿದರು.

‘ಇದು ಆರೋಗ್ಯ ಪೂರೈಕೆದಾರರ ಡಿಜಿಟಲ್ ನೋಂದಣಿಗಳು ಮತ್ತು ಆರೋಗ್ಯ ಸೌಲಭ್ಯಗಳು, ಅನನ್ಯ ಆರೋಗ್ಯ ಗುರುತು ಮತ್ತು ಆರೋಗ್ಯ ಸೌಲಭ್ಯಗಳಿಗೆ ಸಾರ್ವತ್ರಿಕ ಪ್ರವೇಶವನ್ನು ಒಳಗೊಂಡಿರುತ್ತದೆ’ಎಂದು ಅವರು ಹೇಳಿದರು.

ADVERTISEMENT

ಈ ಕಾರ್ಯಕ್ರಮವು 23 ಟೆಲಿ ಮೆಂಟಲ್ ಹೆಲ್ತ್ ಕೇಂದ್ರಗಳ ನೆಟ್‌ವರ್ಕ್ ಅನ್ನು ಒಳಗೊಂಡಿರುತ್ತದೆ. ಇದಕ್ಕೆ ಪ್ರಧಾನ ಕೇಂದ್ರವಾಗಿ ಬೆಂಗಳೂರಿನ ನಿಮ್ಹಾನ್ಸ್ ಇರಲಿದೆ. ಬೆಂಗಳೂರಿನ ಐಐಐಟಿ ಸಂಸ್ಥೆ ತಾಂತ್ರಿಕ ಸಹಾಯವನ್ನು ನೀಡಲಿದೆ ಎಂದು ಸೀತಾರಾಮನ್ ತಿಳಿಸಿದರು.

ಸಹಕಾರ ಸಂಘಗಳ ತೆರಿಗೆ ದರ ಶೇ.15ಕ್ಕೆ ಇಳಿಕೆ

* ಸಹಕಾರ ಸಂಘಗಳ ತೆರಿಗೆ ದರ ಶೇ.15ಕ್ಕೆ ಇಳಿಕೆ

* ಡಿಜಿಟಲ್ ಆಸ್ತಿ ವರ್ಗಾವಣೆಯ ಮೇಲೆ 30% ತೆರಿಗೆ

ಇ-ಪಾಸ್‌ಪೋರ್ಟ್‌ಗಳು, 5ಜಿ

* 2022-23ರ ಒಳಗೆ 5G ಮೊಬೈಲ್ ಸೇವೆಗಳು ಬಿಡುಗಡೆ

* ಎಂಬೆಡೆಡ್ ಚಿಪ್ಸ್ ಮತ್ತು ಫ್ಯೂಚರಿಸ್ಟಿಕ್ ತಂತ್ರಜ್ಞಾನದೊಂದಿಗೆ ಇ-ಪಾಸ್‌ಪೋರ್ಟ್‌ಗಳನ್ನು ಮುಂದಿನ ವರ್ಷ ಹೊರತರಲಾಗುವುದು.

* ಎಲೆಕ್ಟ್ರಾನಿಕ್ ವಲಯಕ್ಕೆ ಉತ್ತೇಜನ ನೀಡಲು, ಬ್ಯಾಟರಿ ವಿನಿಮಯ ನೀತಿಯನ್ನು ಪರಿಚಯಿಸಲಾಗುವುದು

* 400 ಹೊಸ ವಂದೇ ಭಾರತ್ ರೈಲುಗಳನ್ನು ಪರಿಚಯಿಸಲಾಗುವುದು

* 75 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕಿಂಗ್ ಘಟಕಗಳು, ಅಂಚೆ ಕಚೇರಿಗಳಲ್ಲಿ ಕೋರ್ ಬ್ಯಾಂಕಿಂಗ್ ಸೇವೆ.
 

ಮಿಲಿಟರಿ ಉಪಕರಣ ಉದ್ಯಮದಲ್ಲಿ ಖಾಸಗಿ ಉದ್ಯಮಕ್ಕೆ ಪ್ರೋತ್ಸಾಹ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ (ಆರ್ & ಡಿ) ಉದ್ಯಮ, ಸ್ಟಾರ್ಟ್‌ಅಪ್‌ಗಳು ಮತ್ತು ಅಕಾಡೆಮಿಗಳಿಗೆ ತೆರೆಯಲಾಗುವುದು ಎಂದು ಸಚಿವೆ ನಿರ್ಮಲಾ ಘೋಷಿಸಿದರು.

ಮಿಲಿಟರಿ ಪ್ಲಾಟ್‌ಫಾರ್ಮ್‌ಗಳು ಮತ್ತು ಸಲಕರಣೆಗಳ ವಿನ್ಯಾಸ ಮತ್ತು ಅಭಿವೃದ್ಧಿಯನ್ನು ಕೈಗೊಳ್ಳಲು ಖಾಸಗಿ ಉದ್ಯಮವನ್ನು ಪ್ರೋತ್ಸಾಹಿಸಲಾಗುವುದು. ರಕ್ಷಣಾ ಕ್ಷೇತ್ರದಲ್ಲಿ ಆರ್ & ಡಿ ಬಜೆಟ್‌ನ 68% ಮೇಕ್ ಇನ್ ಇಂಡಿಯಾಗೆ ಮೀಸಲಿಡಲಾಗಿದೆ ಎಂದು ಸೀತಾರಾಮನ್ ಹೇಳಿದರು.

75 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕಿಂಗ್ ಘಟಕ

ಭಾರತದ ಸ್ವಾತಂತ್ರ್ಯದ 75 ವರ್ಷಗಳನ್ನು ಗುರುತಿಸಲು ದೇಶಾದ್ಯಂತ 75 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕಿಂಗ್ ಘಟಕಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಡಿಜಿಟಲ್ ಬ್ಯಾಂಕಿಂಗ್ ತನ್ನ ಪ್ರಯೋಜನಗಳನ್ನು ಗ್ರಾಹಕ ಸ್ನೇಹಿಯಾಗಿ ದೇಶದ ಮೂಲೆ ಮೂಲೆಗಳಿಗೆ ಕೊಂಡೊಯ್ಯಲಿದೆ ಎಂದು ಸೀತಾರಾಮನ್ ಹೇಳಿದರು. "ಆರ್ಥಿಕ ಮತ್ತು ಬಳಕೆದಾರ ಸ್ನೇಹಿಯಾಗಿರುವ ಪಾವತಿ ಪ್ಲಾಟ್‌ಫಾರ್ಮ್‌ಗಳ ಬಳಕೆಯನ್ನು ಉತ್ತೇಜಿಸಲು ಸಹ ಗಮನಹರಿಸಲಾಗುವುದು" ಎಂದು ಅವರು ಹೇಳಿದರು
 

ಪಾಲಿಶ್ ಮಾಡಿದ ವಜ್ರಗಳು, ರತ್ನಗಳ ಮೇಲಿನ ಕಸ್ಟಮ್ಸ್ ಸುಂಕವನ್ನು 5% ಕ್ಕೆ ಇಳಿಕೆ

ಕತ್ತರಿಸಿದ ಮತ್ತು ಪಾಲಿಶ್ ಮಾಡಿದ ವಜ್ರಗಳು, ರತ್ನಗಳ ಮೇಲಿನ ಕಸ್ಟಮ್ಸ್ ಸುಂಕವನ್ನು 5% ಕ್ಕೆ ಇಳಿಸಲಾಗುವುದು: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಕೇಂದ್ರ ಮತ್ತು ರಾಜ್ಯಗಳ ಸರ್ಕಾರಿ ನೌಕರರ ತೆರಿಗೆ ಕಡಿತದ ಮಿತಿಯನ್ನು 10% ರಿಂದ 14% ಕ್ಕೆ

ಕೇಂದ್ರ ಮತ್ತು ರಾಜ್ಯಗಳ ಸರ್ಕಾರಿ ನೌಕರರ ತೆರಿಗೆ ಕಡಿತದ ಮಿತಿಯನ್ನು 10% ರಿಂದ 14% ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರಿ ನೌಕರರ ಸಾಮಾಜಿಕ ಭದ್ರತಾ ಪ್ರಯೋಜನಗಳನ್ನು ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾಗಿ ತರಲು ಸಹಾಯ ಮಾಡುತ್ತದೆ: ನಿರ್ಮಲಾ ಸೀತಾರಾಮನ್
 

ಜನವರಿ ತಿಂಗಳ ಒಟ್ಟು ಜಿಎಸ್‌ಟಿ ಸಂಗ್ರಹಗಳು 1,40,986 ಕೋಟಿ ರೂಪಾಯಿ

2022 ರ ಜನವರಿ ತಿಂಗಳ ಒಟ್ಟು ಜಿಎಸ್‌ಟಿ ಸಂಗ್ರಹಗಳು 1,40,986 ಕೋಟಿ ರೂಪಾಯಿಗಳಾಗಿವೆ, ಇದು ಜಿಎಸ್‌ಟಿ ಪ್ರಾರಂಭವಾದಾಗಿನಿಂದ ಅತಿ ಹೆಚ್ಚು: ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್

ಪಿಎಂ ಆವಾಸ್ ಯೋಜನೆಯಡಿ 80 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಳಿಸಲು ರೂ 48,000 ಕೋಟಿ ಮಂಜೂರು

2022-23ನೇ ಸಾಲಿನಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 80 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಳಿಸಲು ರೂ 48,000 ಕೋಟಿ ಮಂಜೂರು

ರಿಟರ್ನ್ಸ್ ಸಲ್ಲಿಕೆಗೆ ಒಂದು ವರ್ಷ ಹೆಚ್ಚು ಕಾಲಾವಕಾಶ

ದೋಷವನ್ನು ಸರಿಪಡಿಸಲು ಅವಕಾಶವನ್ನು ಒದಗಿಸಲು, ತೆರಿಗೆದಾರರು ಇದೀಗ ಸಂಬಂಧಿತ ಅಸೆಸ್ಮೆಂಟ್‌ ವರ್ಷದಿಂದ 2 ವರ್ಷಗಳಲ್ಲಿ ನವೀಕರಿಸಿದ ರಿಟರ್ನ್ ಅನ್ನು ಸಲ್ಲಿಸಬಹುದು

ಕಾವೇರಿ–ಪೆನ್ನಾರ್ ಸೇರಿ ದೇಶದ 5 ನದಿಗಳ ಜೋಡಣೆಗೆ ಅನುಮೋದನೆ

ಕಾವೇರಿ–ಪೆನ್ನಾರ್ ಸೇರಿ ದೇಶದ 5 ನದಿಗಳ ಜೋಡಣೆಗೆ ಅನುಮೋದನೆ ನೀಡಲಾಗಿದೆ. ಗೋದಾವರಿ–ಕೃಷ್ಣ, ಕೃಷ್ಣಾ–ಪೆನ್ನಾರ್, ನರ್ಮದಾ–ಗೋದಾವರಿ ನದಿಗಳ ಜೋಡಣೆಗೆ ಒಪ್ಪಿಗೆ ನೀಡಲಾಗಿದ್ದು, ಇದಕ್ಕಾಗಿ ಈ ಬಜೆಟ್‌ನಲ್ಲಿ 44 ಸಾವಿರ ಕೋಟಿ ಹಣ ಮೀಸಲಿಡಲಾಗಿದೆ: ನಿರ್ಮಲಾ ಸೀತಾರಾಮನ್

2022-23 ರಿಂದ ಆರ್‌ಬಿಐನಿಂದ ಡಿಜಿಟಲ್ ರೂಪಾಯಿ

ಬ್ಲಾಕ್‌ಚೈನ್ ಮತ್ತು ಇತರ ತಂತ್ರಜ್ಞಾನಗಳನ್ನು ಬಳಸಿಕೊಂಡು ಡಿಜಿಟಲ್ ರೂಪಾಯಿಯನ್ನು 2022-23 ರಿಂದ ಆರ್‌ಬಿಐನಿಂದ ನೀಡಲಾಗುವುದು. ಇದು ಆರ್ಥಿಕತೆಗೆ ದೊಡ್ಡ ಉತ್ತೇಜನ ನೀಡುತ್ತದೆ:ನಿರ್ಮಲಾ ಸೀತಾರಾಮನ್
 

ವಿವಿಧೋದ್ದೆಶ ಕೆನ್ ಬೆಟ್ವಾಯೋಜನೆ 

ಕೆನ್ ಬೆಟ್ವಾಯೋಜನೆಯ ಅನುಷ್ಠಾನದ ಮೂಲದ ಅಂದಾಜು ವೆಚ್ಚ 44,605 ​​ಕೋಟಿಯಲ್ಲಿ 9 ಲಕ್ಷ ಹೆಕ್ಟೇರ್ ಕೃಷಿ ಭೂಮಿಗೆ ನೀರಾವರಿ ಪ್ರಯೋಜನಗಳು, 62 ಲಕ್ಷ ಜನರಿಗೆ ಕುಡಿಯುವ ನೀರು, 103 ಮೆಗಾವ್ಯಾಟ್ ಜಲವಿದ್ಯುತ್. 27 ಮೆಗಾವ್ಯಾಟ ಸೌರ ವಿದ್ಯುತ್ ಉತ್ಪಾದನೆ ಗುರಿ ಹೊಂದಲಗಿದೆ.


 

ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ‘ವನ್ ಕ್ಲಾಸ್ ವನ್ ಟಿವಿ’

ಕೋವಿಡ್ ಸಾಂಕ್ರಾಮಿಕದಿಂದಾಗಿ ಗ್ರಾಮೀಣ ಪ್ರದೇಶಗಳ ಮಕ್ಕಳ ಶಿಕ್ಷಣಕ್ಕೆ ತೊಡಕಾಗಿರುವುದಕ್ಕೆ ‘ವನ್ ಕ್ಲಾಸ್ ವನ್ ಟಿವಿ’ ಆರಂಭಿಸಲಾಗುವುದು. ಪ್ರಧಾನಿ ‘ಇ-ವಿದ್ಯಾ’ ಯೋಜನೆ ಅಡಿಯಲ್ಲಿ 200 ಚಾನೆಲ್​ಗಳು ಅಸ್ತಿತ್ವಕ್ಕೆ ಬರಲಿವೆ ಎಂದು ಸಚಿವೆ ತಿಳಿಸಿದ್ದಾರೆ.

2 ಲಕ್ಷ ಅಂಗನವಾಡಿಗಳನ್ನು ಮೇಲ್ದರ್ಜೆಗೇರಿಸಲಾಗುವುದು: ನಿರ್ಮಲಾ

ಬಜೆಟ್​ನ ಮೂಲಾಧಾರಗಳು

ಪಿಎಂ ಗತಿಶಕ್ತಿ, ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿ, ಉತ್ಪಾದಕತೆಯ ವೃದ್ಧಿ, ಅವಕಾಶಗಳ ಹೆಚ್ಚಳ, ವಿದ್ಯುತ್ ಉತ್ಪಾದನೆ, ವಿತರಣೆಯಲ್ಲಿ ಸುಧಾರಣೆ, ಪರಿಸರ ಸಂರಕ್ಷಣೆ, ವ್ಯವಸ್ಥಿತ ಹೂಡಿಕೆಗಳಿಗೆ ಒತ್ತು ಇವು ಬಜೆಟ್‌ ಮೂಲಾಧಾರ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

400 ಹೊಸ ತಲೆಮಾರಿನ ವಂದೇ ಭಾರತ್ ರೈಲುಗಳನ್ನು ತರಲಾಗುವುದು

* ಮುಂದಿನ 3 ವರ್ಷಗಳಲ್ಲಿ ಉತ್ತಮ ದಕ್ಷತೆಯೊಂದಿಗೆ 400 ಹೊಸ ತಲೆಮಾರಿನ ವಂದೇ ಭಾರತ್ ರೈಲುಗಳನ್ನು ತರಲಾಗುವುದು

* ಗತಿ ಶಕ್ತಿ ಕಾರ್ಗೋ ಟರ್ಮಿನಲ್‌ಗಳನ್ನು ಮುಂದಿನ 3 ವರ್ಷಗಳಲ್ಲಿ ಅಭಿವೃದ್ಧಿಪಡಿಸಲಾಗುವುದು ಮತ್ತು ಮೆಟ್ರೋ ವ್ಯವಸ್ಥೆಗಳನ್ನು ನಿರ್ಮಿಸಲು ನವೀನ ಮಾರ್ಗಗಳ ಅನುಷ್ಠಾನ ಮಾಡಲಾಗುವುದು

ಈ ಬಜೆಟ್ ಮೂಲಕ 25 ವರ್ಷಗಳ ಬೆಳವಣಿಗೆ ಗುರಿ

ಈ ಕೇಂದ್ರ ಬಜೆಟ್ ಮುಂದಿನ 25 ವರ್ಷಗಳ ‘ಅಮೃತ್ ಕಲ್’ಮೇಲೆ ಅಡಿಪಾಯ ಹಾಕಲು ಮತ್ತು ಆರ್ಥಿಕತೆಯ ನೀಲನಕ್ಷೆಯನ್ನು ನೀಡಲು ಪ್ರಯತ್ನಿಸುತ್ತದೆ: ನಿರ್ಮಲಾ ಸೀತಾರಾಮನ್
 

2021-22ರ ಬಜೆಟ್‌ನಲ್ಲಿ ಸಾರ್ವಜನಿಕ ಹೂಡಿಕೆ ಮತ್ತು ಬಂಡವಾಳ ವೆಚ್ಚದಲ್ಲಿ ತೀವ್ರ ಏರಿಕೆ

2021-22ರ ಬಜೆಟ್‌ನಲ್ಲಿ ಸಾರ್ವಜನಿಕ ಹೂಡಿಕೆ ಮತ್ತು ಬಂಡವಾಳ ವೆಚ್ಚದಲ್ಲಿ ತೀವ್ರ ಏರಿಕೆ ಕಂಡುಬಂದಿದೆ...ಈ ಬಜೆಟ್ (2022-23) ಯುವಕರು, ಮಹಿಳೆಯರು, ರೈತರು, ಎಸ್‌ಸಿ, ಎಸ್‌ಟಿಗೆ ಅನುಕೂಲವಾಗಲಿದೆ... ; ಪ್ರಧಾನಮಂತ್ರಿ ಗತಿ ಶಕ್ತಿ ಮಾಸ್ಟರ್ ಪ್ಲಾನ್ ಮೂಲಕ ನೆರವು ಸಿಗಲಿದೆ:  ನಿರ್ಮಲಾ ಸೀತಾರಾಮನ್
 

ಬಲವಾದ ಬೆಳವಣಿಗೆಯ ವಿಶ್ವಾಸವಿದೆ: ನಿರ್ಮಲಾ

ನಾವು ಓಮೈಕ್ರಾನ್ ಅಲೆಯ ಮಧ್ಯೆ ಇದ್ದೇವೆ, ನಮ್ಮ ವ್ಯಾಕ್ಸಿನೇಷನ್ ಅಭಿಯಾನದ ವೇಗವು ಹೆಚ್ಚು ಸಹಾಯ ಮಾಡಿದೆ. ನಾವು ಬಲವಾದ ಬೆಳವಣಿಗೆಯೊಂದಿಗೆ ಮುಂದುವರಿಯುತ್ತೇವೆ ಎಂದು ನನಗೆ ವಿಶ್ವಾಸವಿದೆ: ನಿರ್ಮಲಾ ಸೀತಾರಾಮನ್
 

ಶೇಕಡ 9.27ಕ್ಕೆ ಭಾರತದ ಬೆಳವಣಿಗೆ ಗುರಿ ​​

ಭಾರತದ ಬೆಳವಣಿಗೆ 9.27% ​​ಎಂದು ಅಂದಾಜಿಸಲಾಗಿದೆ: ಸಂಸತ್ತಿನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಕೇಂದ್ರ ಬಜೆಟ್ ಮಂಡನೆ ಆರಂಭಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಬಜೆಟ್ 2022ಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ಕಾಗದ ರಹಿತ ಬಜೆಟ್: ಟ್ಯಾಬ್ಲೆಟ್ ಹಿಡಿದು ಬಂದ ನಿರ್ಮಲಾ ಸೀತಾರಾಮನ್

ಕೇಂದ್ರದ ಸಂಪುಟ ಸಭೆಗೆ ಆಗಮಿಸಿದ ಪ್ರಧಾನಿ ಮೋದಿ ಮತ್ತು ಸಚಿವರು

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ ಭವನ ತಲುಪಿದ್ದು, ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ

ಬಜೆಟ್‌ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಕುತೂಹಲಕಾರಿ ಮಾಹಿತಿ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಷ್ಟ್ರಪತಿ ಭವನ ತಲುಪಿದ್ದಾರೆ. 11 ಗಂಟೆಗೆ ಸಂಸತ್‌ನಲ್ಲಿ ಬಜೆಟ್ ಮಂಡನೆ ಮಾಡಲಿದ್ದಾರೆ

ಬಜೆಟ್ ಬಗ್ಗೆ ಕಿರಣ್ ಮಜುಂದಾರ್ ಶಾ ನಿರೀಕ್ಷೆಗಳು...

ಕೋವಿಡ್ ಸಾಂಕ್ರಾಮಿಕವು ನಮ್ಮ ಆರ್ಥಿಕತೆ ಮೇಲೆ ಬೀರಿರುವ ಪರಿಣಾಮದಿಂದ ಹೊರಬರಲು ಹಣಕಾಸು ಸಚಿವರು ಭತ್ಯೆಗಳ ಬೂಸ್ಟರ್ ಡೋಸ್ ನೀಡಬಹುದೆಂಬ ನಿರೀಕ್ಷೆಯಲ್ಲಿದ್ದೇನೆ. ನಾವು ಖರೀದಿಯನ್ನು ಉತ್ತೇಜಿಸಬೇಕಿದೆ. ಪ್ರಯಾಣ, ಪ್ರವಾಸೋದ್ಯಮ ಮತ್ತು ಆತಿಥ್ಯ ಕ್ಷೇತ್ರವನ್ನೂ ಪುನರುಜ್ಜೀವನಗೊಳಿಸಬೇಕಾಗಿದೆ. ಹಣದುಬ್ಬರ ಎದುರಿಸಲು ಜನಸಾಮಾನ್ಯರಿಗೆ ಹೆಚ್ಚು ಆದಾಯದ ಅಗತ್ಯವಿದೆ ಎಂದು ಕಿರಣ್ ಮಜುಂದಾರ್ ಶಾ ಟ್ವೀಟ್ ಮಾಡಿದ್ದಾರೆ.

ಆರ್ಥಿಕ ಬೆಳವಣಿಗೆಗಾಗಿ ಹೂಡಿಕೆ ಹೆಚ್ಚಿಸಲು ಬಜೆಟ್‌ನಲ್ಲಿ ಉತ್ತೇಜನ ಸಾಧ್ಯತೆ

ಆರ್ಥಿಕ ಬೆಳವಣಿಗೆಗಾಗಿ ಈ ಬಾರಿಯ ಬಜೆಟ್‌ನಲ್ಲಿ ಮೂಲಸೌಕರ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹೂಡಿಕೆ ಹೆಚ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

2021–22ರ ಆರ್ಥಿಕ ಸಮೀಕ್ಷೆ: ಕೋವಿಡ್‌ನ ದಟ್ಟ ಛಾಯೆ

2021-22ನೇ ಆರ್ಥಿಕ ವರ್ಷದ ಮೊದಲ ಮೂರು ತ್ರೈಮಾಸಿಕದಲ್ಲಿ ಕೈಗಾರಿಕಾ ವಲಯವು ಸಾಧಾರಣ ಮಟ್ಟದ ಪ್ರಗತಿ ಸಾಧಿಸಿದೆ.

ಮನೆಯಿಂದಲೇ ಕೆಲಸ ಮಾಡುವವರಿಗೆ ಸಿಗಬಹುದೇ ತೆರಿಗೆ ವಿನಾಯಿತಿ?

ಹೆಚ್ಚುತ್ತಿರುವ ಹಣದುಬ್ಬರ ಮತ್ತು ಕಡಿಮೆಯಾಗುತ್ತಿರುವ ತಲಾ ಆದಾಯಗಳಿಂದಾಗಿ ಉದ್ಯೋಗಿಗಳು ‘ವರ್ಕ್ ಫ್ರಂ ಹೋಮ್’ ಭತ್ಯೆ ಮತ್ತು ತೆರಿಗೆ ಕಡಿತ ನಿರೀಕ್ಷಿಸುತ್ತಿದ್ದಾರೆ.

ಆರ್ಥಿಕ ಸಮೀಕ್ಷೆ: ಮುಂದಿನ ವರ್ಷ ತಗ್ಗಲಿದೆ ಜಿಡಿಪಿ, ಶೇ 8-8.5ರ ಆರ್ಥಿಕ ಬೆಳವಣಿಗೆ ನಿರೀಕ್ಷೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.