ADVERTISEMENT

Union Budget | ಇದು 'ತಾರತಮ್ಯದ ಬಜೆಟ್’: ನಾಳೆ ‘ಇಂಡಿಯಾ’ ಬಣದಿಂದ ಪ್ರತಿಭಟನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಜುಲೈ 2024, 14:46 IST
Last Updated 23 ಜುಲೈ 2024, 14:46 IST
<div class="paragraphs"><p>‘ಇಂಡಿಯಾ’ ಬಣದ ನಾಯಕರ ಸಭೆ</p></div>

‘ಇಂಡಿಯಾ’ ಬಣದ ನಾಯಕರ ಸಭೆ

   

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿರುವುದು ‘ತಾರತಮ್ಯದ ಬಜೆಟ್’ ಎಂದು ‘ಇಂಡಿಯಾ’ ಬಣದ ಸಂಸದರು ದೂರಿದ್ದಾರೆ.

ಬಜೆಟ್‌ನಲ್ಲಿ ರಾಜ್ಯಗಳಿಗೆ ಅನುದಾನ ಮತ್ತು ಹೊಸ ಯೋಜನೆಗಳ ಘೋಷಣೆ ಮಾಡುವಲ್ಲಿ ತಾರತಮ್ಯ ಮಾಡಲಾಗಿದೆ ಎಂದು ‘ಇಂಡಿಯಾ’ ಬಣದ ನಾಯಕರು ಆಕ್ರೋಶ ಹೊರಹಾಕಿದ್ದು, ನಾಳೆ (ಬುಧವಾರ) ಸಂಸತ್‌ನಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.

ADVERTISEMENT

ದೆಹಲಿಯಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ‘ಇಂಡಿಯಾ’ ಬಣದ ನಾಯಕರು ಸಭೆ ನಡೆಸುತ್ತಿದ್ದು, ಪ್ರತಿಭಟನೆ ನಡೆಸುವ ಕುರಿತು ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ರಚಿಸಲು ಮುಖ್ಯ ಪಾತ್ರವಹಿಸಿರುವ ಜೆಡಿಯು ಮತ್ತು ಟಿಡಿಪಿ ನಾಯಕರು ಕ್ರಮವಾಗಿ ಬಿಹಾರ, ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಒತ್ತಾಯಿಸಿದ್ದರು. ಆದರೆ, ಎರಡೂ ರಾಜ್ಯಗಳಿಗೂ ವಿಶೇಷ ಸ್ಥಾನಮಾನ ನೀಡದಿದ್ದರೂ ಭರಪೂರ ಅನುದಾನ ಮತ್ತು ಹೊಸ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.