ADVERTISEMENT

ಬಿಜೆಪಿ ಬಚಾವೋ ಬಜೆಟ್‌; ಕನ್ನಡಿಗರಿಗೆ ಮಹಾ ದ್ರೋಹ: ಡಿ.ಕೆ.ಶಿವಕುಮಾರ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಜುಲೈ 2024, 12:22 IST
Last Updated 23 ಜುಲೈ 2024, 12:22 IST
<div class="paragraphs"><p>ಡಿ.ಕೆ.ಶಿವಕುಮಾರ್</p></div>

ಡಿ.ಕೆ.ಶಿವಕುಮಾರ್

   

(ಪ್ರಜಾವಾಣಿ ಸಂಗ್ರಹ ಚಿತ್ರ)

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿರುವ ಬಜೆಟ್, 'ಶೇ 100ರಷ್ಟು ಬಿಜೆಪಿ ಬಚಾವೋ ಬಜೆಟ್ ಆಗಿದ್ದು, ಕನ್ನಡಿಗರಿಗೆ ಮಹಾ ದ್ರೋಹ ಮಾಡಲಾಗಿದೆ' ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

ADVERTISEMENT

ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್‌'ನಲ್ಲಿ ಪೋಸ್ಟ್ ಮಾಡಿದ್ದಾರೆ.

'ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಮೇಲೆ ನಾವು ನಂಬಿಕೆ ಇಟ್ಟಿದ್ದೆವು. ಆದರೆ ಆಂಧ್ರಪ್ರದೇಶ ಹಾಗೂ ಬಿಹಾರ ರಾಜ್ಯಗಳಿಗೆ ಮಣೆ ಹಾಕುವ ಮೂಲಕ ಸರ್ಕಾರವನ್ನು ಉಳಿಸಿಕೊಳ್ಳುವ ಯತ್ನ ಮಾಡಲಾಗಿದೆ' ಎಂದು ಹೇಳಿದ್ದಾರೆ.

'ಕರ್ನಾಟಕಕ್ಕೆ ಎಂದಿನಂತೆ ಕೇಂದ್ರ ಬಿಜೆಪಿ ಸರ್ಕಾರ ಮಲತಾಯಿ ಧೋರಣೆ ತೋರುವುದನ್ನು ಮುಂದುವರಿಸಿದೆ. ವಿಶೇಷವಾಗಿ ಕಾಂಗ್ರೆಸ್‌ ಆಡಳಿತದಲ್ಲಿರುವ ರಾಜ್ಯಗಳಿಗೆ ಅನ್ಯಾಯವಾಗಿದೆ. ರಾಜ್ಯದಲ್ಲಿ ಬಾಕಿ ಇರುವ ಯಾವುದೇ ಪ್ರಮುಖ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿಲ್ಲ. ಪ್ರಸಕ್ತ ಸಾಲಿನ ಬಜೆಟ್‌ ಅನ್ನು ಕನ್ನಡಿಗರಿಗೆ ಮಾಡಿರುವ ಮಹಾ ದ್ರೋಹ ಎಂದು ಒಂದೇ ಸಾಲಿನಲ್ಲಿ ಹೇಳಬಹುದು' ಎಂದು ಟೀಕಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.