ADVERTISEMENT

Budget 2025: ಸತತ 8ನೇ ಸಲ ಬಜೆಟ್ ಮಂಡಿಸಲಿರುವ ನಿರ್ಮಲಾ ಸೀತಾರಾಮನ್

ಪಿಟಿಐ
Published 30 ಜನವರಿ 2025, 7:13 IST
Last Updated 30 ಜನವರಿ 2025, 7:13 IST
<div class="paragraphs"><p>ನಿರ್ಮಲಾ ಸೀತಾರಾಮನ್</p></div>

ನಿರ್ಮಲಾ ಸೀತಾರಾಮನ್

   

(ಪಿಟಿಐ ಚಿತ್ರ)

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಫೆಬ್ರುವರಿ 1ರಂದು ಸತತ ಎಂಟನೇ ಬಾರಿ ಬಜೆಟ್ ಮಂಡಿಸಲಿದ್ದಾರೆ. ಆ ಮೂಲಕ ದಾಖಲೆ ಬರೆಯಲಿದ್ದಾರೆ.

ADVERTISEMENT

ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ದಾಖಲೆ ಹೊಂದಿದ್ದಾರೆ. ಅವರು ಒಟ್ಟು 10 ಬಾರಿ ಬಜೆಟ್ ಮಂಡಿಸಿದ್ದರು.

ಮೊರಾರ್ಜಿ ದೇಸಾಯಿ ಹಣಕಾಸು ಸಚಿವರಾಗಿದ್ದಾಗ, 1959ರಿಂದ 1964ರವರೆಗೆ ಸತತ ಆರು ಬಾರಿ ಮತ್ತು 1967ರಿಂದ 1969ರ ಅವಧಿಯಲ್ಲಿ ನಾಲ್ಕು ಬಾರಿ ಬಜೆಟ್ ಮಂಡಿಸಿದ್ದರು.

ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಒಂಬತ್ತು ಬಾರಿ ಬಜೆಟ್ ಮಂಡಿಸಿದ್ದರು. ಹಾಗೆಯೇ ಪ್ರಣಬ್ ಮುಖರ್ಜಿ ಭಾರತದ ಹಣಕಾಸು ಸಚಿವರಾಗಿದ್ದಾಗ ಎಂಟು ಬಾರಿ ಬಜೆಟ್ ಮಂಡಿಸಿದ್ದರು.

ಮಧ್ಯಮ ವರ್ಗದ ಮೇಲೆ ಹೊರೆಯನ್ನು ತಗ್ಗಿಸಲು ಮತ್ತು ಆರ್ಥಿಕತೆಗೆ ಹೆಚ್ಚಿನ ಉತ್ತೇಜನ ನೀಡುವ ನಿಟ್ಟಿನಲ್ಲಿ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುವ ನಿರೀಕ್ಷೆಯಿದೆ ಎಂದು ತಜ್ಞರು ಅಂದಾಜಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.