ನವದೆಹಲಿ: ‘ಕೇಂದ್ರ ಬಜೆಟ್ ಯಾವುದೇ ಒಂದು ರಾಜ್ಯಕ್ಕೆ ಸೀಮಿತವಾಗಿ ಇರುವುದಿಲ್ಲ. ಒಟ್ಟಾರೆ ಎಲ್ಲ ರಾಜ್ಯಗಳನ್ನೂ ಒಳಗೊಂಡಿರುತ್ತದೆ. ಕರ್ನಾಟಕಕ್ಕೆ ಏನೇನು ಕೊಡಬೇಕೋ ಅದೆಲ್ಲವನ್ನೂ ಕೊಡಲಾಗಿದೆ’ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದರು.
ಹೊಸ ಐಐಟಿ ಜಿಲ್ಲಾಸ್ಪತ್ರೆಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಕಿಸಾನ್ ಕ್ರೆಡಿಟ್ ಸಾಲ ಹೆಚ್ಚಳ ಸ್ಟಾರ್ಟ್ ಅಪ್ ಧನ ಧಾನ್ಯ ಯೋಜನೆ ₹12 ಲಕ್ಷದ ವರೆಗೆ ತೆರಿಗೆ ವಿನಾಯಿತಿ ನವಜಾತ ಶಿಶು ಮತ್ತು ತಾಯಂದಿರಿಗೆ ಪೌಷ್ಟಿಕ ಆಹಾರ ಮೆಡಿಕಲ್ ಸೀಟು ಹೆಚ್ಚಳ ಇವೆಲ್ಲಾ ಕೊಡುಗೆಗಳು ಕರ್ನಾಟಕಕ್ಕೂ ಅನ್ವಯಿಸುತ್ತವೆಯಲ್ಲ ಎಂದು ಪ್ರತ್ಯುತ್ತರ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.