
ಪಿಟಿಐನವದೆಹಲಿ: ದೇಶದಲ್ಲಿ 700 ಜಿಲ್ಲೆಗಳಿದ್ದು, ಪ್ರತಿ ಜಿಲ್ಲೆಯಲ್ಲಿ ಬಾಲಕಿಯರ ಹಾಸ್ಟೆಲ್ ನಿರ್ಮಾಣ ಮಾಡುವುದಾಗಿ 2026–27ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ.
ಸತತ 9ನೇ ಬಾರಿಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಮಾಡಿದ್ದಾರೆ.
ಪಶುವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು ಮತ್ತು ರೋಗನಿರ್ಣಯ ಪ್ರಯೋಗಾಲಯಗಳಿಗೆ ಸಾಲ-ಸಂಬಂಧಿತ ಬಂಡವಾಳ ಸಬ್ಸಿಡಿ ಬೆಂಬಲ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದಿದ್ದಾರೆ.
ಗುಜರಾತ್‌ನ ಜಾಮ್‌ನಗರದಲ್ಲಿರುವ ಆಯುಷ್ ಔಷಧಾಲಯಗಳು ಮತ್ತು ಔಷಧ ಪರೀಕ್ಷಾ ಪ್ರಯೋಗಾಲಯಗಳನ್ನು ಮೇಲ್ದದರ್ಜೆಗೆ ಏರಿಸುವುದು ಮತ್ತು ಜಾಮ್‌ನಗರದಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಕೇಂದ್ರ ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.