ADVERTISEMENT

ಕೇಂದ್ರ ಬಜೆಟ್‌: ಕ್ಷಯ ನಿರ್ಮೂಲನೆಗೆ ಪಣ, ಆರೋಗ್ಯ ಸುಧಾರಣೆಗೆ ಒತ್ತು

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2020, 11:08 IST
Last Updated 1 ಫೆಬ್ರುವರಿ 2020, 11:08 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಆರೋಗ್ಯ ಮತ್ತು ನೈಮರ್ಲ್ಯ ಕ್ಷೇತ್ರಕ್ಕೆ ಒಟ್ಟಾರೆಯಾಗಿ₹69,000 ಕೋಟಿಯನ್ನು ಮೀಸಲಿಡಲಾಗಿದೆ.

ಒಟ್ಟು ಹಣದಲ್ಲಿಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಗಾಗಿ ₹ 6400 ಕೋಟಿ, ಹಾಗೂ ಸ್ವಚ್ಛ ಭಾರತ ಯೋಜನೆಗಾಗಿ₹ 12.300 ಕೋಟಿ ತೆಗೆದಿರಿಸಲಾಗಿದ್ದು ವಿವಿಧ ಯೋಜನೆಗಳಿಗಾಗಿ ಉಳಿದ ಹಣವನ್ನು ಬಳಕೆ ಮಾಡಲಾಗುವುದು ಎಂದು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ.

ದೇಶದ 112 ಜಿಲ್ಲೆಗಳಲ್ಲಿ ಆಯುಷ್ಮಾನ್ ಭಾರತ್ ಯೋಜನೆಡೆಯಡಿ ನೂತನ ಆಸ್ಪತ್ರೆಗಳನ್ನು ನಿರ್ಮಾಣ ಮಾಡಲಾಗುವುದು. 2024ರ ವೇಳೆಗೆ ದೇಶದೆಲ್ಲೆಡೆ ಜನೌಷಧ ಕೇಂದ್ರಗಳನ್ನು ವಿಸ್ತರಿಸಲು ಸರ್ಕಾರ ಬದ್ಧವಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್‌ನಲ್ಲಿ ಘೋಷಣೆ ಮಾಡಿದರು.

ADVERTISEMENT

ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯ ಮೂಲಕ ತಾಲ್ಲೂಕು ಮತ್ತು ಹೋಬಳಿ ಹಂತದ ಅಸ್ಪತ್ರೆಗಳಿಗೂ ಸೌಲಭ್ಯ ಒದಗಿಸಲು ಚಿಂತನೆ ಮಾಡಲಾಗಿದ್ದು ಖಾಸಗಿ ಸಹಭಾಗಿತ್ವದಲ್ಲಿ ಆರೋಗ್ಯ ಕ್ಷೇತ್ರಕ್ಕೆ ಸುಧಾರಣೆ ತರಲಾಗುವುದು.

ಕ್ಷಯರೋಗ ಹೋದರೆ ದೇಶ ಬಲಿಷ್ಠವಾಗುತ್ತೆ, 2025ರ ವೇಳೆಗೆ ಕ್ಷಯ ರೋಗ ನಿರ್ಮೂಲನೆ ಮಾಡಲು ಸರ್ಕಾರ ಸರ್ವ ರೀತಿಯ ಪ್ರಯತ್ನ ಮಾಡಲಾಗುವುದು ಎಂದು ನಿರ್ಮಲಾ ಸೀತಾರಾಮನ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.