ADVERTISEMENT

Union Budget 2026: ಗ್ರಾಮೀಣ ಮಹಿಳೆಯರಿಗೆ ಒತ್ತು ನೀಡಿದ ನಿರ್ಮಲಾ ಸೀತಾರಾಮನ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಫೆಬ್ರುವರಿ 2026, 9:56 IST
Last Updated 1 ಫೆಬ್ರುವರಿ 2026, 9:56 IST
<div class="paragraphs"><p>ನಿರ್ಮಲಾ ಸೀತಾರಾಮನ್</p></div>

ನಿರ್ಮಲಾ ಸೀತಾರಾಮನ್

   

ನವದೆಹಲಿ: ಸತತವಾಗಿ 9ನೇ ಬಾರಿಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಈ ಬಾರಿಯ ಕೇಂದ್ರ ಬಜೆಟ್ 2026ಕ್ಕೆ ಸಂಬಂಧಿಸಿದಂತೆ ನಿರ್ಮಲಾ ಸೀತಾರಾಮನ್ ಅವರು ಮಹಿಳೆಯರ ಆರ್ಥಿಕ ಸಬಲೀಕರಣದತ್ತ ಪ್ರಮುಖ ಹೆಜ್ಜೆ ಇಟ್ಟಿದ್ದಾರೆ.

ಲಕ್‌ಪತಿ ದೀದಿ ಯೋಜನೆಯನ್ನು ವಿಸ್ತರಿಸಲಾಗಿದ್ದು, ಮಹಿಳಾ ಉದ್ಯಮಶೀಲತೆಯನ್ನು ಉತ್ತೇಜಿಸಲು ‘ಶಿ-ಮಾರ್ಟ್’​ ಸ್ಥಾಪಿಸುವುದಾಗಿ ಬಜೆಟ್​ನಲ್ಲಿ ಘೋಷಣೆ ಮಾಡಲಾಗಿದೆ. ಲಕ್‌ಪತಿ ದೀದಿ ಯೋಜನೆಯೂ ಗ್ರಾಮೀಣ ಮಹಿಳೆಯರಿಗೆ ಅನುಕೂಲವಾಗಲಿದ್ದು, ಶಿ-ಮಾರ್ಟ್ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ವಿದ್ಯಾವಂತ ಮತ್ತು ಕೌಶಲ್ಯಪೂರ್ಣ ಮಹಿಳಾ ಉದ್ಯಮಿಗಳನ್ನು ವಿಶ್ವ ದರ್ಜೆಯ ಉದ್ಯಮಿಗಳಾಗಿ ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ. ಜೊತೆಗೆ ಲಕ್‌ಪತಿ ದೀದಿ ಯೋಜನೆಯು ಮಹಿಳೆಯರಿಗೆ ತರಬೇತಿ ನೀಡುವುದಲ್ಲದೆ, ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ದೇಶಾದ್ಯಂತ ಹೆಚ್ಚಿನ ಮಾರಾಟ ಮಳಿಗೆಗಳನ್ನು ತೆರೆಯುತ್ತದೆ ಎಂದು ಬಜೆಟ್‌ನಲ್ಲಿ ತಿಳಿಸಲಾಗಿದೆ.

ADVERTISEMENT

ಕಳೆದ ವರ್ಷದ ಲಕ್‌ಪತಿ ದೀದಿ ಕಾರ್ಯಕ್ರಮದ ಯಶಸ್ಸಿನ ಬಳಿಕ, ಈ ವರ್ಷ 3 ಕೋಟಿ ಮಹಿಳೆಯರು ವಾರ್ಷಿಕ ₹1 ಲಕ್ಷ ಆದಾಯವನ್ನು ತಲುಪಿದ್ದಾರೆ. ಸರ್ಕಾರವು 5 ಕೋಟಿ ಲಕ್‌ಪತಿ ದೀದಿಗಳನ್ನು ಗುರಿಯಾಗಿಸಿಕೊಂಡಿದೆ.

ದೇಶದ ಪ್ರತಿ ಜಿಲ್ಲೆಗೆ ಬಾಲಕಿಯರ ಹಾಸ್ಟೆಲ್‌ ಘೋಷಣೆ

ದೇಶದಲ್ಲಿ 700 ಜಿಲ್ಲೆಗಳಿದ್ದು, ಪ್ರತಿ ಜಿಲ್ಲೆಯಲ್ಲಿ ಬಾಲಕಿಯರ ಹಾಸ್ಟೆಲ್‌ ನಿರ್ಮಾಣ ಮಾಡುವುದಾಗಿ ಕೇಂದ್ರ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಪಶುವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು ಮತ್ತು ರೋಗನಿರ್ಣಯ ಪ್ರಯೋಗಾಲಯಗಳಿಗೆ ಸಾಲ-ಸಂಬಂಧಿತ ಬಂಡವಾಳ ಸಬ್ಸಿಡಿ ಬೆಂಬಲ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.