
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು 2026–27ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ.
ಭೌಗೋಳಿಕ ರಾಜಕೀಯ ಅನಿಶ್ಚಿತತೆ, ಬಂಡವಾಳದ ಹೊರ ಹರಿವು, ಅಮೆರಿಕದ ಸುಂಕ ಹೇರಿಕೆಯಿಂದ ಭಾರತದ ಅರ್ಥ ವ್ಯವಸ್ಥೆಯ ಮೇಲೆ ಪರಿಣಾಮ ಬೀರದಂತೆ ಆರ್ಥಿಕ ಸ್ಥಿರತೆ ಮತ್ತು ಅಭಿವೃದ್ಧಿ ಮಧ್ಯೆ ಸಮನ್ವಯ ಕಾಯ್ದುಕೊಳ್ಳುವ ಉಪಕ್ರಮಗಳನ್ನು ನಿರ್ಮಲಾ ಸೀತಾರಾಮನ್ 2026–27ನೇ ಸಾಲಿನ ಬಜೆಟ್‌ನಲ್ಲಿ ಪ್ರಕಟಿಸುವ ಸಾಧ್ಯತೆಗಳಿವೆ.
*ತೆರಿಗೆ ಕಡಿತವು ಸರ್ಕಾರದ ಆದಾಯಕ್ಕೆ ಹೊಡೆತ ನೀಡುವುದರಿಂದ ಈ ಆಯ್ಕೆಯನ್ನು ಕೆಲವು ಕ್ಷೇತ್ರಗಳಿಗೆ ಮಾತ್ರ ಸೀಮಿತಗೊಳಿಸಬಹುದು
* ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಸ್ಥಿರಗೊಳ್ಳದ ಹೊರತು ಹೂಡಿಕೆದಾರರ ವಿಶ್ವಾಸವನ್ನು ಶೀಘ್ರವಾಗಿ ಮರುಸ್ಥಾಪಿಸುವುದು ಕಷ್ಟ
* ಡಾಲರ್ ಎದುರು ರೂಪಾಯಿ ವಿನಿಮಯ ಮೌಲ್ಯ ಕುಸಿಯುತ್ತಿರುವುದರಿಂದ ವಿದೇಶಿ ಹೂಡಿಕೆದಾರಿಂದ ಷೇರುಗಳ ಮಾರಾಟ ಹೆಚ್ಚಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.