
ಉಡಾನ್ ಸೇವೆ
ನವದೆಹಲಿ: 2026–27ನೇ ಸಾಲಿನ ಆರ್ಥಿಕ ವರ್ಷದಲ್ಲಿ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಾದೇಶಿಕ ವಾಯು ಸಂಪರ್ಕ ಯೋಜನೆಗೆ (ಉಡಾನ್) ಸುಮಾರು ಶೇ27ರಷ್ಟು ಹೆಚ್ಚುವರಿ ಅನುದಾನ ದೊರೆಯಲಿದೆ.
2025–26ನೇ ಸಾಲಿನ ಪರಿಷ್ಕೃತ ಬಜೆಟ್ ಅಂದಾಜಿನ ಪ್ರಕಾರ ಮಾರ್ಚ್ 31ಕ್ಕೆ ಕೊನೆಗೊಳ್ಳಲಿರುವ ಪ್ರಸಕ್ತ ಆರ್ಥಿಕ ವರ್ಷದಲ್ಲಿ ನಾಗರಿಕ ವಿಮಾನಯಾನ ಸಚಿವಾಲಯದ ಒಟ್ಟು ಅನುದಾನ ಹಂಚಿಕೆಯನ್ನು ₹4,688.03 ಕೋಟಿಗೆ ನಿಗದಿಪಡಿಸಲಾಗಿದೆ. ಮುಂದಿನ ಆರ್ಥಿಕ ವರ್ಷದಲ್ಲಿ ಈ ಅನುದಾನ ಹಂಚಿಕೆ ₹4,669.92 ಕೋಟಿಗೆ ತಲುಪಲಿದೆ.
ಹೀಗಾಗಿ ಉಡಾನ್‌ಗೆ ಹೆಚ್ಚಿನ ಅನುದಾನ ದೊರೆಯುವ ನಿರೀಕ್ಷೆ ಇದೆ. ಪ್ರಸಕ್ತ ವರ್ಷದಲ್ಲಿ ಉಡಾನ್ ಯೋಜನೆಯ ಅನುದಾನ 434.50 ಕೋಟಿ ಆಗಿದ್ದು, ಮುಂದಿನ ಆರ್ಥಿಕ ವರ್ಷದಲ್ಲಿ ಇದು ₹550 ಕೋಟಿಗೆ ಏರಿಕೆಯಾಗಲಿದೆ ಎಂದು ಬಜೆಟ್ ದಾಖಲೆಗಳಿಂದ ತಿಳಿದುಬಂದಿದೆ. ಹೀಗಾದರೆ ಉಡಾನ್ ಅನುದಾನ ಹಂಚಿಕೆಯಲ್ಲಿ ಶೇ 27 ಹೆಚ್ಚಳವಾದಂತಾಗುತ್ತದೆ.
ಪ್ರಾದೇಶಿಕ ವಿಮಾನಯಾನ ಕ್ಷೇತ್ರದಲ್ಲಿ ಸುಧಾರಣೆ ತಂದು ವಾಯುಯಾನ ಸೇವೆಯನ್ನು ಉತ್ತೇಜಿಸುವ ಉದ್ದೇಶವನ್ನು ಉಡಾನ್ ಹೊಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.