ADVERTISEMENT

ನಬಾರ್ಡ್‌ನಿಂದ ₹ 12,767 ಕೋಟಿ ನೀಡಿಕೆ 

ಪಿಟಿಐ
Published 5 ಮೇ 2020, 20:00 IST
Last Updated 5 ಮೇ 2020, 20:00 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ರಾಜ್ಯ ಸಹಕಾರಿ ಬ್ಯಾಂಕ್‌ಗಳು ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳಿಗೆ ₹ 12,727 ಕೋಟಿ ಸಾಲ ನೀಡಿರುವುದಾಗಿರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ (ನಬಾರ್ಡ್‌) ತಿಳಿಸಿದೆ.

ರೈತರಿಗೆ ಸಾಲ ನೀಡಲು ಅನುಕೂಲ ಮಾಡಿಕೊಡುವ ಉದ್ದೇಶದಿಂದ ಶೇ 4.8ರ ಬಡ್ಡಿದರದಲ್ಲಿ ಒಂದು ವರ್ಷಗಳ ಅವಧಿಗೆ ಸಾಲ ನೀಡಲಾಗಿದೆ ಎಂದು ತಿಳಿಸಿದೆ.

ಕರ್ನಾಟಕ, ಕೇರಳ, ಆಂಧ್ರಪ್ರದೇಶ, ಬಿಹಾರ, ಹರಿಯಾಣ, ತಮಿಳುನಾಡು ಒಳಗೊಂಡಂತೆ 15 ರಾಜ್ಯಗಳ ಗ್ರಾಮೀಣ ಬ್ಯಾಂಕ್‌ಗಳಿಗೆ ಸಾಲ ನೆರವು ವಿಸ್ತರಿಸಿರುವುದಾಗಿ ತಿಳಿಸಿದೆ.

ADVERTISEMENT

ನಬಾರ್ಡ್‌ಗೆ ₹25 ಸಾವಿರ ಕೋಟಿ ನೀಡುವುದಾಗಿಭಾರತೀಯ ರಿಸರ್ವ್‌ ಬ್ಯಾಂಕ್‌ ಕಳೆದ ತಿಂಗಳು ಘೋಷಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.