ನವದೆಹಲಿ: ಪ್ರಸಕ್ತ ವರ್ಷದ ಜನವರಿ 31ರ ವೇಳೆಗೆ ದೇಶದಲ್ಲಿ ಮಾನ್ಯತೆ ಪಡೆದ 1,61,150 ನವೋದ್ಯಮಗಳು ಇವೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್ ಗೋಯಲ್ ಮಂಗಳವಾರ ಲೋಕಸಭೆಗೆ ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು 28,511 ನವೋದ್ಯಮಗಳಿದ್ದರೆ, ಕರ್ನಾಟಕದಲ್ಲಿ 16,954 ಇವೆ. ಸ್ಟಾರ್ಟ್‌ಅಪ್ ಇಂಡಿಯಾ ಕ್ರಿಯಾ ಯೋಜನೆ ಅಡಿಯಲ್ಲಿ ಈ ನವೋದ್ಯಮಗಳು ತೆರಿಗೆ ಪ್ರೋತ್ಸಾಹಕ್ಕೆ ಅರ್ಹತೆ ಹೊಂದಿರುತ್ತವೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.