ADVERTISEMENT

ಮೂರು ಬ್ಯಾಂಕ್‌ಗಳ ವಿಲೀನ: ಕೇಂದ್ರ ಸರ್ಕಾರದ ಅಂತಿಮ ಸಮ್ಮತಿ ಬಾಕಿ

ಪಿಟಿಐ
Published 9 ಅಕ್ಟೋಬರ್ 2018, 19:30 IST
Last Updated 9 ಅಕ್ಟೋಬರ್ 2018, 19:30 IST
   

ಮುಂಬೈ: ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ ಆಫ್‌ ಬರೋಡಾ, ವಿಜಯ ಬ್ಯಾಂಕ್‌ ಮತ್ತು ದೇನಾ ಬ್ಯಾಂಕ್‌ಗಳ ವಿಲೀನ ಪ್ರಸ್ತಾವವನ್ನು ಕೇಂದ್ರ ಸರ್ಕಾರದ ಅಂತಿಮ ಸಮ್ಮತಿಗಾಗಿ ಕಳಿಸಲಾಗಿದೆ.

ಈ ಮೂರೂ ಬ್ಯಾಂಕ್‌ಗಳ ಆಡಳಿತ ಮಂಡಳಿಗಳು ಈಗಾಗಲೇ ವಿಲೀನ ಪ್ರಸ್ತಾವಕ್ಕೆ ಪ್ರತ್ಯೇಕವಾಗಿ ತಮ್ಮ ಅಂಗೀಕಾರ ನೀಡಿವೆ. ಈ ಬ್ಯಾಂಕ್‌ಗಳನ್ನು ವಿಲೀನಗೊಳಿಸಿ ದೇಶದ ಮೂರನೇ ಅತಿದೊಡ್ಡ ಬ್ಯಾಂಕ್‌ ಸ್ಥಾಪಿಸಲು ಕೇಂದ್ರ ಸರ್ಕಾರ ಉದ್ದೇಶಿಸಿದೆ.

‘ಮೂರು ಬ್ಯಾಂಕ್‌ಗಳ ವಿಲೀನ ಪ್ರಕ್ರಿಯೆಯ ಪ್ರಾಥಮಿಕ ಹಂತ ಈಗ ಪೂರ್ಣಗೊಂಡಿದೆ. ಕೇಂದ್ರ ಸರ್ಕಾರವು ವಿಲೀನ ಪ್ರಸ್ತಾವವನ್ನು ಔಪಚಾರಿಕವಾಗಿ ಅನುಮೋದಿಸಬೇಕಾಗಿರುವುದು ಮುಂದಿನ ಹಂತವಾಗಿದೆ. ವಿಲೀನ ಪ್ರಕ್ರಿಯೆ ಪೂರ್ಣಗೊಳ್ಳಲು 6 ತಿಂಗಳು ಬೇಕಾಗಬಹುದು’ ಎಂದು ಬ್ಯಾಂಕ್‌ ಆಫ್‌ ಬರೋಡಾದ ವ್ಯವಸ್ಥಾಪಕ ನಿರ್ದೇಶಕ ಪಿ. ಎಸ್‌. ಜಯಕುಮಾರ್‌ ಹೇಳಿದ್ದಾರೆ.

ADVERTISEMENT

ಮೂರೂ ಬ್ಯಾಂಕ್‌ಗಳ ವಿಲೀನದ ನಂತರ ಅವುಗಳ ಒಟ್ಟಾರೆ ವಹಿವಾಟಿನ ಮೊತ್ತವು ₹ 14.82 ಲಕ್ಷ ಕೋಟಿಗಳಷ್ಟಾಗಲಿದೆ. ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ), ಐಸಿಐಸಿಐ ಬ್ಯಾಂಕ್‌ ನಂತರದ ಮೂರನೇ ಅತಿದೊಡ್ಡ ಬ್ಯಾಂಕ್‌ ಇದಾಗಿರಲಿದೆ.

ವಿಲೀನದ ನಂತರ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಸಂಖ್ಯೆ 19ಕ್ಕೆ ಇಳಿಯಲಿದೆ. 2017ರ ಏಪ್ರಿಲ್‌ನಲ್ಲಿ ಐದು ಸಹವರ್ತಿ ಬ್ಯಾಂಕ್‌ಗಳು ಎಸ್‌ಬಿಐನಲ್ಲಿ ವಿಲೀನಗೊಂಡಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.