
ಪಿಟಿಐ
ನವದೆಹಲಿ: ಸಿಮೆಂಟ್ ತಯಾರಿಕಾ ಕಂಪನಿ ಎಸಿಸಿ ಲಿಮಿಟೆಡ್, ಪ್ರಸಕ್ತ ಆರ್ಥಿಕ ವರ್ಷದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ₹1,119 ಕೋಟಿ ತೆರಿಗೆ ನಂತರದ ಲಾಭ (ಪಿಎಟಿ) ಗಳಿಸಿದೆ.
ಕಳೆದ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ಕಂಪನಿ ₹199 ಕೋಟಿ ಲಾಭ ಗಳಿಸಿತ್ತು. ಈ ಲಾಭಕ್ಕೆ ಹೋಲಿಸಿದರೆ ಐದು ಪಟ್ಟು ಹೆಚ್ಚಳವಾಗಿದೆ. ಸಿಮೆಂಟ್ ಮಾರಾಟದಲ್ಲಿನ ಹೆಚ್ಚಳವೇ ಲಾಭದ ಪ್ರಮಾಣ ಏರಿಕೆಗೆ ಕಾರಣ ಎಂದು ಕಂಪನಿ ಶುಕ್ರವಾರ ಷೇರುಪೇಟೆಗೆ ತಿಳಿಸಿದೆ.
ಕಳೆದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ವರಮಾನವು ₹4,542 ಕೋಟಿಯಷ್ಟಿತ್ತು. ಈ ಬಾರಿ ₹5,896 ಕೋಟಿಗೆ ಹೆಚ್ಚಳವಾಗಿದೆ. ಒಟ್ಟು ವೆಚ್ಚವು ₹5,393 ಕೋಟಿಗೆ ಏರಿಕೆಯಾಗಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.