ನವದೆಹಲಿ: ಬಹುರಾಷ್ಟ್ರೀಯ ಕಂಪನಿ ಏಸರ್ ಇಂಡಿಯಾ, ತನ್ನ ಮಹಿಳಾ ಉದ್ಯೋಗಿಗಳಿಗೆ ವೇತನಸಹಿತ ಒಂದು ದಿನದ ಮುಟ್ಟಿನ ರಜೆ ಘೋಷಿಸಿದೆ.
ಮಹಿಳಾ ಉದ್ಯೋಗಿಯು ಪ್ರತಿ ತಿಂಗಳಿಗೆ ಹೆಚ್ಚುವರಿಯಾಗಿ ಒಂದು ದಿನ ವೇತನ ಸಹಿತ ರಜೆ ತೆಗೆದುಕೊಳ್ಳಬಹುದು. ಇದು ನಿಯಮಿತ ರಜೆಯ ಮೇಲೆ ಯಾವುದೇ ಪರಿಣಾಮ ಬೀರಲ್ಲ ಎಂದು ಕಂಪನಿ ಸೋಮವಾರ ತಿಳಿಸಿದೆ.
ಕೆಲಸದ ಸ್ಥಳದಲ್ಲಿ ಲಿಂಗ ಸಮಾನತೆ, ಆರೋಗ್ಯ ಮತ್ತು ಸಿಬ್ಬಂದಿಗೆ ಬೆಂಬಲ ನೀಡಲು ಇದು ಸಹಕಾರಿಯಾಗಿದೆ ಎಂದು ಕಂಪನಿ ತಿಳಿಸಿದೆ.
ಈ ತಿಂಗಳ ಆರಂಭದಲ್ಲಿ ಎಲ್ ಆ್ಯಂಡ್ ಟಿ ಕಂಪನಿಯು ತನ್ನ ಮಹಿಳಾ ಉದ್ಯೋಗಿಗಳಿಗೆ ವೇತನಸಹಿತ ಒಂದು ದಿನದ ಮುಟ್ಟಿನ ರಜೆ ಘೋಷಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.