ADVERTISEMENT

ಅದಾನಿ ಪೋರ್ಟ್ಸ್‌ಗೆ ₹3,023 ಕೋಟಿ ಲಾಭ

ಪಿಟಿಐ
Published 1 ಮೇ 2025, 14:14 IST
Last Updated 1 ಮೇ 2025, 14:14 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: 2024–25ರ ಆರ್ಥಿಕ ವರ್ಷದ ಮಾರ್ಚ್‌ ತ್ರೈಮಾಸಿಕದಲ್ಲಿ ಅದಾನಿ ಪೋರ್ಟ್ಸ್ ಆ್ಯಂಡ್‌ ಸ್ಪೆಷಲ್‌ ಎಕನಾಮಿಕ್‌ ಜೋನ್‌ (ಎಪಿಎಸ್‌ಇಜೆಡ್‌) ₹3,023 ಕೋಟಿ ನಿವ್ವಳ ಲಾಭ ಗಳಿಸಿದೆ.

2023–24ರ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ₹2,014 ಕೋಟಿ ಗಳಿಸಿತ್ತು. ಈ ಲಾಭಕ್ಕೆ ಹೋಲಿಸಿದರೆ ಶೇ 50ರಷ್ಟು ಹೆಚ್ಚಳವಾಗಿದೆ. ಹೆಚ್ಚಿದ ವರಮಾನದಿಂದ ಲಾಭದ ಪ್ರಮಾಣ ಏರಿಕೆಯಾಗಿದೆ ಎಂದು ಕಂಪನಿ ಷೇರುಪೇಟೆಗೆ ಗುರುವಾರ ತಿಳಿಸಿದೆ.

ಕಂಪನಿಯ ಒಟ್ಟು ವರಮಾನ ಮಾರ್ಚ್‌ ತ್ರೈಮಾಸಿಕದಲ್ಲಿ ₹8,769 ಕೋಟಿಯಾಗಿದೆ. ಇದರ ಹಿಂದಿನ ವರ್ಷದ ಇದೇ ಅವಧಿಯಲ್ಲಿ ₹7,199 ಕೋಟಿಯಷ್ಟಿತ್ತು. ಒಟ್ಟು ವೆಚ್ಚವು ₹5,382 ಕೋಟಿಯಾಗಿದೆ. 2024–25ರ ಪೂರ್ಣ ಆರ್ಥಿಕ ವರ್ಷದಲ್ಲಿ ₹11,061 ಕೋಟಿ ನಿವ್ವಳ ಲಾಭ ಗಳಿಸಿದೆ ಎಂದು ತಿಳಿಸಿದೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.