ನವದೆಹಲಿ: ದೇಶದ ಆರ್ಥಿಕ ಮುನ್ನೋಟವನ್ನು ಏಷ್ಯಾ ಅಭಿವೃದ್ಧಿ ಬ್ಯಾಂಕ್ (ಎಡಿಬಿ) ಪರಿಷ್ಕರಿಸಿದೆ. ಏಷ್ಯಾ ಮತ್ತು ಪೆಸಿಫಿಕ್ ರಾಷ್ಟ್ರಗಳ ಮುನ್ನೋಟವನ್ನು ತಗ್ಗಿಸಿದೆ.
2024–25ನೇ ಆರ್ಥಿಕ ವರ್ಷದಲ್ಲಿ ಭಾರತದ ಒಟ್ಟು ಆಂತರಿಕ ಉತ್ಪನ್ನವು (ಜಿಡಿಪಿ) ಶೇ 7ರಷ್ಟು ಪ್ರಗತಿ ಕಾಣಲಿದೆ ಎಂದು ಈ ಮೊದಲು ಅಂದಾಜಿಸಿತ್ತು. ಈಗ ಶೇ 6.5ರಷ್ಟು ದಾಖಲಾಗಿದೆ ಎಂದು ಅಂದಾಜಿಸಿದೆ.
2025–26ನೇ ಆರ್ಥಿಕ ವರ್ಷದಲ್ಲಿ ಶೇ 7.2ರಷ್ಟು ಬೆಳವಣಿಗೆ ಆಗಲಿದೆ ಎಂದು ಹೇಳಿತ್ತು. ಇದನ್ನು ಶೇ 7ಕ್ಕೆ ಪರಿಷ್ಕರಿಸಿದೆ. ಖಾಸಗಿ ವಲಯದಲ್ಲಿ ಹೂಡಿಕೆ ಪ್ರಮಾಣ ಮತ್ತು ವಸತಿಗೆ ಬೇಡಿಕೆಯು ನಿರೀಕ್ಷೆಗಿಂತಲೂ ಕಡಿಮೆಯಾಗಲಿದೆ. ಹಾಗಾಗಿ, ಬೆಳವಣಿಗೆಯು ಇಳಿಕೆಯಾಗಲಿದೆ ಎಂದು ಬುಧವಾರ ಬಿಡುಗಡೆಯಾಗಿರುವ ವರದಿ ತಿಳಿಸಿದೆ.
ಏಷ್ಯಾ ಮತ್ತು ಪೆಸಿಫಿಕ್ ರಾಷ್ಟ್ರಗಳ ಆರ್ಥಿಕತೆ ಬೆಳವಣಿಗೆಯನ್ನು ಶೇ 5 ರಿಂದ ಶೇ 4.9ಕ್ಕೆ ಪರಿಷ್ಕರಿಸಿದೆ ಎಂದು ಹೇಳಿದೆ.
ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) 2024–25ನೇ ಆರ್ಥಿಕ ವರ್ಷದಲ್ಲಿ ಜಿಡಿಪಿಯನ್ನು ಶೇ 7.2ರಿಂದ ಶೇ 6.6ಕ್ಕೆ ತಗ್ಗಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.