ADVERTISEMENT

ತೆರಿಗೆ ಪಾವತಿ ಒಪ್ಪಿಗೆ ಪತ್ರ ಕಡ್ಡಾಯವಲ್ಲ: ಕೇಂದ್ರ

ಪಿಟಿಐ
Published 28 ಜುಲೈ 2024, 15:42 IST
Last Updated 28 ಜುಲೈ 2024, 15:42 IST
   

ನವದೆಹಲಿ: ವಿದೇಶಕ್ಕೆ ತೆರಳುವ ಎಲ್ಲರೂ ತೆರಿಗೆ ಪಾವತಿಸಿರುವ ಬಗ್ಗೆ ಆದಾಯ ತೆರಿಗೆ ಇಲಾಖೆಯಿಂದ ಒಪ್ಪಿಗೆ ಪ್ರಮಾಣ ಪತ್ರ ಪಡೆಯುವುದು ಕಡ್ಡಾಯವಲ್ಲ. ಅಧಿಕ ಮೊತ್ತದ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಮಾತ್ರವೇ ಹೊಸ ನಿಯಮವು ಅನ್ವಯವಾಗಲಿದೆ ಎಂದು ಕೇಂದ್ರ ಸರ್ಕಾರವು, ಭಾನುವಾರ ಸ್ಪಷ್ಟಪಡಿಸಿದೆ.

ಸರ್ಕಾರವು ಲೋಕಸಭೆಯಲ್ಲಿ ಹಣಕಾಸು ಮಸೂದೆ 2024 ಅನ್ನು ಮಂಡಿಸಿದೆ. ಈ ಮಸೂದೆಯಲ್ಲಿ ಕಪ್ಪು ಹಣ ಕಾಯ್ದೆ 2015ರಲ್ಲಿ ಕಪ್ಪು ಹಣಕ್ಕೆ ಸಂಬಂಧಿಸಿದಂತೆ ಇರುವ ಉಲ್ಲೇಖವನ್ನು ಸೇರ್ಪಡೆಗೊಳಿಸಲು ಹಣಕಾಸು ಸಚಿವಾಲಯವು ಪ್ರಸ್ತಾಪಿಸಿದೆ. ಇದರ ಅನ್ವಯ ಯಾವುದೇ ವ್ಯಕ್ತಿಯು ವಿದೇಶ ಪ್ರವಾಸಕ್ಕೆ ತೆರಳುವ ಮೊದಲು ತೆರಿಗೆ ಬಾಕಿ ಉಳಿಸಿಕೊಂಡಿಲ್ಲ ಎಂಬ ಬಗ್ಗೆ ಪ್ರಮಾಣ ಪತ್ರ ಸಲ್ಲಿಸುವುದು ಕಡ್ಡಾಯವಾಗಿದೆ.

ಎಲ್ಲರಿಗೂ ಈ ಮಾನದಂಡವನ್ನು ಕಡ್ಡಾಯಗೊಳಿಸುವುದು ಸರಿಯಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹಲವು ಮಂದಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರವು, ‘ಉದ್ದೇಶಿತ ತಿದ್ದುಪಡಿಯು ಎಲ್ಲರಿಗೂ ಅನ್ವಯವಾಗುವುದಿಲ್ಲ’ ಎಂದು ಸ್ಪಷ್ಟಪಡಿಸಿದೆ.

ADVERTISEMENT

ಗಂಭೀರ ಹಣಕಾಸಿನ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿದ್ದು, ಆದಾಯ ತೆರಿಗೆ ಕಾಯ್ದೆಯಡಿ ಈ ಪ್ರಕರಣದಲ್ಲಿ ತನಿಖೆಗೆ ಒಳಪಡುವವರಿಗೆ ಹೊಸ ನಿಯಮವು ಅನ್ವಯವಾಗಲಿದೆ. ₹10 ಲಕ್ಷಕ್ಕಿಂತ ಹೆಚ್ಚು ಮೊತ್ತದ ನೇರ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ನಿಯಮವು ಅನ್ವಯಿಸುತ್ತದೆ ಎಂದು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.