ನವದೆಹಲಿ: ಏರ್ ಇಂಡಿಯಾದ ಖಾಸಗೀಕರಣ ಪ್ರಕ್ರಿಯೆ ಭಾಗವಾಗಿ ಷೇರುಗಳ ಖರೀದಿ ಒಪ್ಪಂದಕ್ಕೆ ಸಚಿವರ ತಂಡ ಒಪ್ಪಿಗೆ ಸೂಚಿಸಿದೆ.
ಇದೇ ತಿಂಗಳಲ್ಲಿ ಷೇರು ಖರೀದಿಗೆ ಆಸಕ್ತಿ ವ್ಯಕ್ತಪಡಿಸುವುದಕ್ಕೆ ಆಹ್ವಾನ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಏರ್ ಇಂಡಿಯಾಗೆ 2018–19ನೇ ಸಾಲಿನಲ್ಲಿ ಒಟ್ಟು ₹8556 ಕೋಟಿ ನಷ್ಟವಾಗಿದ್ದು, ಸದ್ಯ 80 ಸಾವಿರ ಕೋಟಿ ಸಾಲದಲ್ಲಿದೆ. ಸ್ವಯಂ ನಿವೃತ್ತಿ ಯೋಜನೆ ಮತ್ತು ಸಾಲ ಪುನರ್‌ರೂಪಿಸುವ ಯೋಜನೆಗೂ ಅನುಮೋದನೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಏರ್ ಇಂಡಿಯಾ ಮುಚ್ಚಲಿದೆ ಎನ್ನುವ ಸುದ್ದಿಗಳು ಆಧಾರರಹಿತವಾಗಿವೆ. ಏರ್ ಇಂಡಿಯಾ ವಿಮಾನಗಳು ಎಂದಿನಂತೆ ಹಾರಾಟ ನಡೆಸಲಿವೆ. ಈ ಬಗ್ಗೆ ಯಾವುದೇ ರೀತಿಯ ಆತಂಕ ಬೇಡ’ ಎಂದು ಏರ್ ಇಂಡಿಯಾ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಅಶ್ವಾನಿ ಲೋಹಾನಿ ಟ್ವೀಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.