ADVERTISEMENT

ಟಾಟಾ ಸಮೂಹಕ್ಕೆ ಏರ್‌ ಇಂಡಿಯಾ ಹಸ್ತಾಂತರ ವಿಳಂಬ

ಪಿಟಿಐ
Published 27 ಡಿಸೆಂಬರ್ 2021, 14:37 IST
Last Updated 27 ಡಿಸೆಂಬರ್ 2021, 14:37 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಏರ್ ಇಂಡಿಯಾ ಕಂಪನಿಯನ್ನು ಟಾಟಾ ಸಮೂಹಕ್ಕೆ ಹಸ್ತಾಂತರ ಮಾಡುವ ಪ್ರಕ್ರಿಯೆಯು ಒಂದು ತಿಂಗಳ ಮಟ್ಟಿಗೆ ಮುಂದಕ್ಕೆ ಹೋಗುವ ಸಾಧ್ಯತೆ ಹೆಚ್ಚಾಗಿದೆ.

ಏರ್ ಇಂಡಿಯಾ ಕಂಪನಿಯನ್ನು ಟಾಟಾ ಸಮೂಹವು ಖರೀದಿಸಿದೆ. ಹಸ್ತಾಂತರ ಪ್ರಕ್ರಿಯೆಯನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವ ಉದ್ದೇಶ ತನ್ನದು ಎಂದು ಕೇಂದ್ರ ಸರ್ಕಾರ ಈ ಹಿಂದೆ ಹೇಳಿತ್ತು.

ಆದರೆ, ಕೆಲವು ಒಪ್ಪಿಗೆಗಳು ಇನ್ನೂ ದೊರೆತಿಲ್ಲ. ಕೆಲವು ಪ್ರಕ್ರಿಯೆಗಳನ್ನು ಇನ್ನಷ್ಟೇ ಪೂರ್ಣಗೊಳಿಸಬೇಕಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು. ‘ಹಸ್ತಾಂತರವು ಜನವರಿಯಲ್ಲಿ ಪೂರ್ಣ ಆಗಬಹುದು’ ಎಂದು ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.