ಸಾಂಕೇತಿಕ ಚಿತ್ರ
(ಪಿಟಿಐ ಚಿತ್ರ)
ನವದೆಹಲಿ: ಪ್ರಸಕ್ತ ವರ್ಷದ ಆರಂಭದಿಂದ ನವೆಂಬರ್ 13ರ ವರೆಗೆ ವಿಮಾನಯಾನ ಸಂಸ್ಥೆಗಳಿಗೆ ಒಟ್ಟು 994 ಹುಸಿ ಬಾಂಬ್ ಬೆದರಿಕೆ ಕರೆಗಳು ಬಂದಿವೆ ಎಂದು ಕೇಂದ್ರ ಸರ್ಕಾರವು, ಬುಧವಾರ ರಾಜ್ಯಸಭೆಗೆ ತಿಳಿಸಿದೆ.
2022ರ ಆಗಸ್ಟ್‌ನಿಂದ ಈ ವರ್ಷದ ನವೆಂಬರ್ 13ರ ವರೆಗೆ ಒಟ್ಟು 1,143 ಹುಸಿ ಬಾಂಬ್ ಬೆದರಿಕೆ ಕರೆ/ ಸಂದೇಶಗಳನ್ನು ಸ್ವೀಕರಿಸಲಾಗಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಖಾತೆಯ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ತಿಳಿಸಿದ್ದಾರೆ.
ಬೆದರಿಕೆ ಕರೆಗಳನ್ನು ಸಮರ್ಥವಾಗಿ ನಿಭಾಯಿಸಲಾಗಿದೆ. ಇಂತಹ ಹುಸಿ ಬೆದರಿಕೆ ಕರೆಗಳನ್ನು ಹತ್ತಿಕ್ಕಲು ಕಾಯ್ದೆಗೆ ತಿದ್ದುಪಡಿ ತರಲು ವಿಮಾನಯಾನ ಸಚಿವಾಲಯವು ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.