ಬೆಂಗಳೂರು: ಹಿಂದೂಸ್ತಾನ್ ಏರೊನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ಕಂಪನಿಯ ನಿರ್ದೇಶಕರಾಗಿ (ಎಂಜಿನಿಯರಿಂಗ್ ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗ) ಅಜಯ್ ಕುಮಾರ್ ಶ್ರೀವಾಸ್ತವ ಅವರು ಮಂಗಳವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ಇದಕ್ಕೂ ಮೊದಲು ಅವರು ಎಚ್‌ಎಎಲ್ ಕಂಪನಿಯ ವಿಮಾನ ಸಂಶೋಧನೆ ಮತ್ತು ವಿನ್ಯಾಸ ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕ ಆಗಿದ್ದರು ಎಂದು ಪ್ರಕಟಣೆ ತಿಳಿಸಿದೆ.
ಶ್ರೀವಾಸ್ತವ ಅವರು 1988ರಿಂದಲೂ ಎಚ್‌ಎಎಲ್‌ನಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ. ವಿಮಾನಗಳ ಕೆಲವು ಪ್ರಮುಖ ಬಿಡಿಭಾಗಗಳನ್ನು ಭಾರತದಲ್ಲೇ ತಯಾರಿಸುವ ಪ್ರಕ್ರಿಯೆಗಳಿಗೆ ಅವರು ನೇತೃತ್ವ ವಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.