ಮುಂಬೈ: ‘ಕಾರ್ಪೊರೇಟ್ ಕಂಪನಿಗಳಿಗೆ ಬ್ಯಾಂಕ್ ಆರಂಭಿಸಲು ಅವಕಾಶ ಕೊಡಬೇಕು ಎನ್ನುವುದು ಆರ್‌ಬಿಐನ ಅಭಿಪ್ರಾಯ ಅಥವಾ ನಿರ್ಧಾರ ಅಲ್ಲ. ಆ ಕುರಿತು ಆರ್‌ಬಿಐನ ಆಂತರಿಕ ಸಮಿತಿ ಸಲಹೆ ನೀಡಿದೆಯಷ್ಟೇ’ ಎಂದು ಗವರ್ನರ್ ಶಕ್ತಿಕಾಂತ್ ದಾಸ್ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ಷೇರುದಾರರು ಮತ್ತು ಸಾರ್ವಜನಿಕರ ಅಭಿಪ್ರಾಯ ಪಡೆದ ನಂತರ ಆರ್‌ಬಿಐ ಒಂದು ನಿರ್ಧಾರಕ್ಕೆ ಬರಲಿದೆ ಎಂದು ತಿಳಿಸಿದ್ದಾರೆ.
ಆರ್‌ಬಿಐನ ಮಾಜಿ ಗವರ್ನರ್ ರಘುರಾಂ ರಾಜನ್ ಸೇರಿದಂತೆ ಹಲವರಿಂದ ಸಮಿತಿಯ ಸಲಹೆಗಳಿಗೆ ತೀವ್ರ ವಿರೋಧ ವ್ಯಕ್ತವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.