ADVERTISEMENT

ಸೂಕ್ತ ಸಮಯದಲ್ಲಿ ಕಾರ್ಮಿಕ ಸಂಹಿತೆ ಅನುಷ್ಠಾನ: ಕೇಂದ್ರ ಸರ್ಕಾರ

ಕೇಂದ್ರ ಕಾರ್ಮಿಕ ಸಚಿವ ಭೂಪೇಂದ್ರ ಯಾದವ್‌ ಹೇಳಿಕೆ

ಪಿಟಿಐ
Published 15 ಜುಲೈ 2022, 11:01 IST
Last Updated 15 ಜುಲೈ 2022, 11:01 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ನಾಲ್ಕು ಕಾರ್ಮಿಕ ಸಂಹಿತೆಗಳಿಗೆ ಸಂಬಂಧಿಸಿದಂತೆ ಬಹುತೇಕ ರಾಜ್ಯಗಳು ಕರಡು ನಿಯಮ ರೂಪಿಸಿದ್ದು, ಸೂಕ್ತ ಸಮಯದಲ್ಲಿ ಹೊಸ ನಿಯಮಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಕೇಂದ್ರ ಕಾರ್ಮಿಕ ಸಚಿವ ಭೂಪೇಂದ್ರ ಯಾದವ್‌ ಶುಕ್ರವಾರ ತಿಳಿಸಿದ್ದಾರೆ.

ಕಾರ್ಮಿಕ ಸಂಹಿತೆಗಳ ಅನುಷ್ಠಾನ ಯಾವತ್ತಿನಿಂದ ಎಂಬ ವಿಚಾರವಾಗಿ ಊಹಾಪೋಹ ಎದ್ದಿರುವ ಸಂದರ್ಭದಲ್ಲಿ ಸಚಿವರು ಈ ಹೇಳಿಕೆ ನೀಡಿದ್ದಾರೆ.

ಕೆಲವು ರಾಜ್ಯಗಳು ಮಾತ್ರ ಕರಡು ನಿಯಮಗಳನ್ನು ಅಂತಿಮಗೊಳಿಸುವ ಹಂತದಲ್ಲಿವೆ ಎಂದೂ ಅವರು ಹೇಳಿದ್ದಾರೆ. ರಾಜಸ್ಥಾನವು ಎರಡು ಸಂಹಿತೆಗಳಿಗೆ ಸಂಬಂಧಿಸಿದಂತೆ ಕರಡು ನಿಯಮಗಳನ್ನು ರೂಪಿಸಿದ್ದು, ಇನ್ನೂ ಎರಡು ಸಂಹಿತೆಗಳ ಕರಡು ನಿಯಮಗಳನ್ನು ಪೂರ್ಣಗೊಳಿಸಬೇಕಿದೆ. ಪಶ್ಚಿಮ ಬಂಗಾಳವು ಕರಡು ನಿಯಮಗಳನ್ನು ಅಂತಿಮಗೊಳಿಸುವ ಹಂತದಲ್ಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ADVERTISEMENT

ಮೇಘಾಲಯ ಸೇರಿದಂತೆ ಈಶಾನ್ಯ ಭಾಗದ ಕೆಲವು ರಾಜ್ಯಗಳು ಕರಡು ನಿಯಮಗಳನ್ನು ಪೂರ್ಣಗೊಳಿಸಿಲ್ಲ.

2019 ಮತ್ತು 2020ರಲ್ಲಿ 29 ಕೇಂದ್ರ ಕಾರ್ಮಿಕ ಕಾನೂನುಗಳನ್ನು ಒಟ್ಟುಗೂಡಿಸಿ ಕೇಂದ್ರ ಸರ್ಕಾರವು ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರೂಪಿಸಿದೆ. ಮೊದಲನೆಯದು ವೇತನ ಸಂಹಿತೆ, ಎರಡನೆಯದುಕೈಗಾರಿಕಾ ಸಂಬಂಧಗಳ ಸಂಹಿತೆ, ಮೂರನೆಯದು ಸಾಮಾಜಿಕ ಭದ್ರತಾ ಸಂಹಿತೆ, ನಾಲ್ಕನೆಯದು ಕೆಲಸದ ಸ್ಥಳದಲ್ಲಿ ಸುರಕ್ಷತೆ, ಆರೋಗ್ಯ ಮತ್ತು ಸ್ಥಿತಿಗತಿ ಸಂಹಿತೆ.

ಈ ನಾಲ್ಕು ಸಂಹಿತೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಈಗಾಗಲೇ ಕರಡು ನಿಯಮಗಳನ್ನು ಪ್ರಕಟಿಸಿದೆ. ರಾಜ್ಯಗಳು ಕರಡು ನಿಯಮಗಳನ್ನು ಪ್ರಕಟಿಸಿದ ಬಳಿಕ ಅವುಗಳಿಗೆ ಸಾರ್ವಜನಿಕರಿಂದ ಸಲಹೆಗಳನ್ನು ಪಡೆಯಲು 30ರಿಂದ 45 ದಿನ ಕಾಲಾವಕಾಶ ಇರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.