ಬೆಂಗಳೂರು: ತನ್ನ ಡೆಲಿವರಿ ಉದ್ಯೋಗಿಗಳ ಮಕ್ಕಳ ವಿದ್ಯಾಭ್ಯಾಸಕ್ಕೆ ನೀಡುವ ‘ಪ್ರತಿಧಿ‘ ವಿದ್ಯಾರ್ಥಿ ವೇತನವನ್ನು ಅಮೆಜಾನ್ ಗುರುವಾರ ವಿತರಿಸಿತು.
ಗುರುವಾರ ಬೆಂಗಳೂರಿನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಲ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ವಿತರಿಸುವ ಮೂಲಕ ಚಾಲನೆ ನೀಡಲಾಯಿತು.
2–12ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನ ವಿತರಿಸಲಾಗುತ್ತಿದೆ. 2022ರಲ್ಲಿ ಈ ಯೋಜನೆಯನ್ನು ಅಮೇಜಾನ್ ಅರಂಭಿಸಿತ್ತು.
ಡೆಲಿವರಿ ಉದ್ಯೀಗಿಗಳ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಸಿಗಬೇಕು ಎನ್ನುವ ಉದ್ದೇಶದಿಂದ ಈ ಯೋಜನೆ ಆರಂಭಿಸಲಾಗಿದೆ ಎಂದು ಅಮೇಜಾನ್ ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.