ADVERTISEMENT

ಉತ್ತರ ಪ್ರದೇಶದಲ್ಲಿ ₹75,000 ಕೋಟಿ ಹೂಡಿಕೆ: ಮುಕೇಶ್ ಅಂಬಾನಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಫೆಬ್ರುವರಿ 2023, 7:34 IST
Last Updated 10 ಫೆಬ್ರುವರಿ 2023, 7:34 IST
ಮುಕೇಶ್ ಅಂಬಾನಿ (ಸಂಗ್ರಹ ಚಿತ್ರ)
ಮುಕೇಶ್ ಅಂಬಾನಿ (ಸಂಗ್ರಹ ಚಿತ್ರ)   

ಲಖನೌ: ಉತ್ತರ ಪ್ರದೇಶದಲ್ಲಿ ಟೆಲಿಕಾಂ, ರಿಟೇಲ್ ಮತ್ತು ಇಂಧನ ವಲಯಗಳಲ್ಲಿ ಮುಂದಿನ ನಾಲ್ಕು ವರ್ಷಗಳಲ್ಲಿ 75,000 ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡುವುದಾಗಿ ರಿಲಯನ್ಸ್ ಇಂಡಸ್ಟ್ರೀಸ್‌ ಲಿಮಿಟೆಡ್‌ನ ಮುಖ್ಯಸ್ಥ ಮುಕೇಶ್ ಅಂಬಾನಿ ಶುಕ್ರವಾರ ಭರವಸೆ ನೀಡಿದ್ದಾರೆ.

ಉತ್ತರ ಪ್ರದೇಶ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಮಾತನಾಡಿದ ಅವರು, 2023 ಡಿಸೆಂಬರ್ ಅಂತ್ಯ ವೇಳೆಗೆ ರಾಜ್ಯದಾದ್ಯಂತ 5ಜಿ ಸೇವೆಗಳನ್ನು ಹೊರತರುವುದಾಗಿ ತಿಳಿಸಿದ್ದಾರೆ.

ಉತ್ತರ ಪ್ರದೇಶ ಜಾಗತಿಕ ಹೂಡಿಕೆದಾರರ ಸಮಾವೇಶ 2023 ಅನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಉದ್ಘಾಟಿಸಿದರು.

ADVERTISEMENT

ಇಂದಿನಿಂದ ಮೂರು ದಿನಗಳ ಕಾಲ ಸಮಾವೇಶ ನಡೆಯಲಿದ್ದು, ಬೃಹತ್ ಹೂಡಿಕೆಯನ್ನು ನಿರೀಕ್ಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.