ADVERTISEMENT

ಆಂಧ್ರಪ್ರದೇಶ: ದೇಶದ ಅತಿದೊಡ್ಡ ಖಾಸಗಿ ಚಿನ್ನದ ಗಣಿಯಲ್ಲಿ ಉತ್ಪಾದನೆ ಶೀಘ್ರ ಆರಂಭ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2025, 15:23 IST
Last Updated 18 ಸೆಪ್ಟೆಂಬರ್ 2025, 15:23 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ (ಪಿಟಿಐ): ‘ಆಂಧ್ರಪ್ರದೇಶದಲ್ಲಿರುವ ದೇಶದ ಅತಿದೊಡ್ಡ ಖಾಸಗಿ ಚಿನ್ನದ ಗಣಿಯಲ್ಲಿ ಪೂರ್ಣ ಪ್ರಮಾಣದ ಉತ್ಪಾದನೆ ಶೀಘ್ರವೇ ಆರಂಭವಾಗಲಿದೆ’ ಎಂದು ಡೆಕ್ಕನ್ ಗೋಲ್ಡ್ ಮೈನ್ಸ್ ಲಿಮಿಟೆಡ್‌ನ (ಡಿಜಿಎಂಎಲ್‌) ವ್ಯವಸ್ಥಾಪಕ ನಿರ್ದೇಶಕ ಹನುಮ ಪ್ರಸಾದ್ ತಿಳಿಸಿದ್ದಾರೆ.

ಈಗಾಗಲೇ ಈ ಚಿನ್ನದ ಯೋಜನೆಗೆ ಪರಿಸರ ಇಲಾಖೆಯಿಂದ ಅನುಮತಿ ದೊರೆತಿದೆ. ರಾಜ್ಯ ಸರ್ಕಾರದ ಅನುಮತಿ ದೊರೆಯಬೇಕಿದೆ ಎಂದು ಹೇಳಿದ್ದಾರೆ.

ಪೂರ್ಣ ಪ್ರಮಾಣದ ಉತ್ಪಾದನೆ ಆರಂಭವಾದ ಬಳಿಕ ವಾರ್ಷಿಕ 750 ಕೆ.ಜಿ ಚಿನ್ನ ಉತ್ಪಾದಿಸುವ ನಿರೀಕ್ಷೆ ಹೊಂದಲಾಗಿದೆ. ಪ್ರಸ್ತುತ ದೇಶದಲ್ಲಿ ಚಿನ್ನದ ಉತ್ಪಾದನೆ ವಾರ್ಷಿಕ 1.5 ಟನ್‌ನಷ್ಟು ಇದೆ. ಕಂಪನಿಯ ಕಾರ್ಯಾಚರಣೆ ಆರಂಭಗೊಂಡರೆ 1 ಟನ್‌ನಷ್ಟು ಹೆಚ್ಚಲಿದೆ ಎಂದು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.