ADVERTISEMENT

ಕರ್ನಾಟಕದಲ್ಲಿ 125 ಕೃಷಿ ಸಹಕಾರ ಸಂಘಗಳು ದಿವಾಳಿ: ಲೋಕಸಭೆಗೆ ಅಮಿತ್ ಶಾ ಮಾಹಿತಿ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2025, 14:48 IST
Last Updated 5 ಆಗಸ್ಟ್ 2025, 14:48 IST
ಅಮಿತ್ ಶಾ –ಪಿಟಿಐ ಚಿತ್ರ
ಅಮಿತ್ ಶಾ –ಪಿಟಿಐ ಚಿತ್ರ   

ನವದೆಹಲಿ: ಕರ್ನಾಟಕದ 6,291 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಪೈಕಿ 125 ಸಂಘಗಳು ದಿವಾಳಿಯಾಗಿದ್ದು, ಅವುಗಳನ್ನು ಮುಚ್ಚುವ ಪ್ರಕ್ರಿಯೆ ನಡೆದಿದೆ ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರು ಲೋಕಸಭೆಗೆ ಮಂಗಳವಾರ ತಿಳಿಸಿದ್ದಾರೆ.

ಮುಚ್ಚುವ ಪ್ರಕ್ರಿಯೆಯಲ್ಲಿ ಇರುವ 125 ಸಹಕಾರ ಸಂಘಗಳ ಪೈಕಿ 28 ಸಂಘಗಳು ಚಿಕ್ಕಬಳ್ಳಾಪುರದಲ್ಲಿ, 13 ಸಂಘಗಳು ಹಾಸನದಲ್ಲಿ, 12 ಸಂಘಗಳು ಬೆಳಗಾವಿಯಲ್ಲಿ ಇವೆ. ರಾಜ್ಯದ 6,291 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಪೈಕಿ 64 ಸಂಘಗಳು ಈಗ ಕಾರ್ಯಾಚರಿಸುತ್ತಿಲ್ಲ ಎಂದು ಶಾ ಅವರು ಹೇಳಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 428 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ನೋಂದಣಿ ಆಗಿದೆ. ಈ ಪೈಕಿ 187 ಸಂಘಗಳು ಬೆಳಗಾವಿಯಲ್ಲಿ ನೋಂದಣಿ ಆಗಿವೆ ಎಂದು ಅವರು ಲೋಕಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.