ಬೆಂಗಳೂರು: ಸೆಲ್ಕೊ ಸೋಲಾರ್ ಲೈಟ್ ಪ್ರೈವೆಟ್ ಲಿಮಿಟೆಡ್ ಸಂಸ್ಥೆಗೆ 2025ನೇ ಸಾಲಿನ ಪ್ರತಿಷ್ಠಿತ ‘ಆಶ್ಡೆನ್’ ಪ್ರಶಸ್ತಿ ಲಭಿಸಿದೆ. ಗ್ರೀನ್ ಆಸ್ಕರ್ ಎಂಬ ಹೆಗ್ಗಳಿಕೆ ಹೊಂದಿರುವ ಈ ಅಂತರರಾಷ್ಟ್ರೀಯ ಪ್ರಶಸ್ತಿಯನ್ನು ಮೂರನೇ ಬಾರಿ ಮುಡಿಗೇರಿಸಿಕೊಂಡ ಗೌರವ ಸೆಲ್ಕೊ ಸೋಲಾರ್ ಸಂಸ್ಥೆಗೆ ಸಲ್ಲುತ್ತದೆ.
ಇದು 25ನೇ ಆಶ್ಡೆನ್ ಪ್ರಶಸ್ತಿಯಾಗಿದ್ದು, ಲಂಡನ್‌ನ ರಾಯಲ್ ಜಿಯೋಗ್ರಾಫಿಕಲ್ ಸೊಸೈಟಿಯಲ್ಲಿ ನಡೆದ ಸಮಾರಂಭದಲ್ಲಿ ಇಂಗ್ಲೆಂಡ್‌ನ ಹವಾಮಾನ ರಾಯಭಾರಿ ರಾಚೆಲ್ ಕೈಟ್ ಮತ್ತು ಉಗಾಂಡದ ಪರಿಸರವಾದಿ ವನೆಸ್ಸಾ ನಕೇಟ್ ಅವರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
ಸೆಲ್ಕೊ ಸೋಲಾರ್ ಕಂಪನಿಗೆ ಈಗಾಗಲೇ 2005 ಮತ್ತು 2007ರಲ್ಲಿ ಆಶ್ಡೆನ್ ಪ್ರಶಸ್ತಿ ಲಭಿಸಿತ್ತು.
1995ರಲ್ಲಿ ಡಾ.ಹರೀಶ್ ಹಂದೆ ಮತ್ತು ನೆವಿಲ್ಲೆ ವಿಲಿಯಮ್ಸ್ ಅವರು ಸೆಲ್ಕೊ ಸೋಲಾರ್ ಕಂಪನಿಯನ್ನು ಸ್ಥಾಪಿಸಿದ್ದರು. ಸದ್ಯ ಈ ಕಂಪನಿ ದೇಶದ ಪ್ರಮುಖ ಸಾಮಾಜಿಕ ಉದ್ಯಮವಾಗಿ ಬೆಳೆದಿದೆ. ಕರ್ನಾಟಕ, ಆಂಧ್ರಪ್ರದೇಶ, ಬಿಹಾರ, ಕೇರಳ, ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ಜನಸಾಮಾನ್ಯರಿಗೆ ಹಸಿರು ಇಂಧನ ಲಭ್ಯವಾಗುವಂತೆ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.