ನವದೆಹಲಿ: ವಾಣಿಜ್ಯ ವಾಹನ ತಯಾರಿಕಾ ಕಂಪನಿ ಅಶೋಕ್ ಲೇಲ್ಯಾಂಡ್ ನಿವ್ವಳ ಲಾಭವು ಪ್ರಸಕ್ತ ಆರ್ಥಿಕ ವರ್ಷದ ಡಿಸೆಂಬರ್ ತ್ರೈಮಾಸಿಕದಲ್ಲಿ ಶೇ 5.19ರಷ್ಟು ಏರಿಕೆಯಾಗಿದ್ದು, ₹862 ಕೋಟಿ ಆಗಿದೆ.
ಕಳೆದ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ಕಂಪನಿಯು ₹819 ಕೋಟಿ ಲಾಭ ಗಳಿಸಿತ್ತು. ವರಮಾನವು ₹11,995 ಕೋಟಿಯಿಂದ ₹14,830 ಕೋಟಿಗೆ ಹೆಚ್ಚಳವಾಗಿದೆ. ಒಟ್ಟು ವೆಚ್ಚವು ₹10,937 ಕೋಟಿಯಿಂದ ₹13,490 ಕೋಟಿಗೆ ತಲುಪಿದೆ ಎಂದು ಕಂಪನಿ ಷೇರುಪೇಟೆಗೆ ಬುಧವಾರ ತಿಳಿಸಿದೆ.
ಡಿಸೆಂಬರ್ ತ್ರೈಮಾಸಿಕದಲ್ಲಿ ಕಂಪನಿಯ ಮಧ್ಯಮ ಮತ್ತು ಭಾರಿ ಗಾತ್ರದ ವಾಣಿಜ್ಯ ವಾಹನಗಳ (ಎಂಎಚ್‌ಸಿವಿ) ಮಾರಾಟದಲ್ಲಿ ಶೇ 23ರಷ್ಟು ಹೆಚ್ಚಳವಾಗಿದ್ದು, 32,929 ವಾಹನಗಳು ಮಾರಾಟವಾಗಿವೆ. ಸಣ್ಣ ಗಾತ್ರದ ವಾಣಿಜ್ಯ ವಾಹನಗಳ (ಎಲ್‌ಸಿವಿ) ಮಾರಾಟದಲ್ಲಿ ಶೇ 30ರಷ್ಟು ಏರಿಕೆಯಾಗಿದ್ದು, 20,518 ವಾಹನಗಳು ಮಾರಾಟವಾಗಿವೆ.
ವಾಹನಗಳ ರಫ್ತಿನಲ್ಲಿ ಶೇ 20ರಷ್ಟು ಹೆಚ್ಚಳವಾಗಿದ್ದು, 4,965 ವಾಹನಗಳು ರಫ್ತಾಗಿವೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.