ನವದೆಹಲಿ: ವಾಣಿಜ್ಯ ವಾಹನಗಳ ತಯಾರಿಕಾ ಕಂಪನಿ ಅಶೋಕ್ ಲೇಲ್ಯಾಂಡ್ ಪ್ರಸಕ್ತ ಆರ್ಥಿಕ ವರ್ಷದ ಜೂನ್ ತ್ರೈಮಾಸಿಕದಲ್ಲಿ ₹657 ಕೋಟಿ ನಿವ್ವಳ ಲಾಭ ಗಳಿಸಿದೆ.
ಕಳೆದ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ಕಂಪನಿಯು ₹550 ಕೋಟಿ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಲಾಭದಲ್ಲಿ ಶೇ 19ರಷ್ಟು ಹೆಚ್ಚಳವಾಗಿದೆ ಎಂದು ಕಂಪನಿ ಗುರುವಾರ ಷೇರುಪೇಟೆಗೆ ತಿಳಿಸಿದೆ.
ವರಮಾನವು ಕಳೆದ ಜೂನ್ ತ್ರೈಮಾಸಿಕದಲ್ಲಿ ₹10,696 ಕೋಟಿಯಷ್ಟಿತ್ತು. ಈ ಬಾರಿ ₹11,708 ಕೋಟಿಗೆ ಏರಿಕೆ ಆಗಿದೆ. ವೆಚ್ಚವು ₹10,920 ಕೋಟಿಯಾಗಿದೆ. ಜೂನ್ ತ್ರೈಮಾಸಿಕದಲ್ಲಿ ಕಂಪನಿಯ 44,238 ವಾಹನಗಳು ಮಾರಾಟವಾಗಿವೆ.
ಜೂನ್ ತ್ರೈಮಾಸಿಕದಲ್ಲಿ ಕಂಪನಿಯು ವಾಹನಗಳ ಮಾರಾಟದಲ್ಲಿ ಸದೃಢ ಬೆಳವಣಿಗೆ ದಾಖಲಿಸಿದೆ. ಅನುಕೂಲಕರ ಮಾರುಕಟ್ಟೆಯಿಂದ ನಿರೀಕ್ಷೆ ಮೀರಿ ವಾಹನಗಳ ಮಾರಾಟವಾಗಿದೆ ಎಂದು ಕಂಪನಿಯ ಅಧ್ಯಕ್ಷ ಧೀರಜ್ ಹಿಂದುಜಾ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.