
ಪಿಟಿಐ
ಅಶ್ವಿನಿ ವೈಷ್ಣವ್ –ಪಿಟಿಐ ಚಿತ್ರ
ನವದೆಹಲಿ: ‘ಸೆಮಿಕಂಡಕ್ಟರ್ ಮತ್ತು ಎಲೆಕ್ಟ್ರಾನಿಕ್ಸ್ ಉಪಕರಣಗಳ ತಯಾರಿಕೆಯಲ್ಲಿ ಭಾರತವು ಮುಂಚೂಣಿ ಸ್ಥಾನಕ್ಕೇರಲು ಅಗತ್ಯವಿರುವ ಎಲ್ಲಾ ಕ್ರಮಕೈಗೊಳ್ಳಲು ಸರ್ಕಾರ ಸಿದ್ಧವಿದೆ’ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ಸಚಿವರಾಗಿ ಮಂಗಳವಾರ ಅಧಿಕಾರ ವಹಿಸಿಕೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತಂತ್ರಜ್ಞಾನ ಮತ್ತು ಡಿಜಿಟಲ್ ವ್ಯವಸ್ಥೆಗೆ ಉತ್ತೇಜನ ನೀಡುವ ಮೂಲಕ ಜನರ ಜೀವನಮಟ್ಟದ ಸುಧಾರಣೆಗೆ ಅನುಕೂಲಕರ ವಾತಾವರಣ ಕಲ್ಪಿಸಲಾಗುವುದು’ ಎಂದರು.
‘ಕೃತಕ ಬುದ್ಧಿಮತ್ತೆ ತಂತ್ರಜ್ಞಾನ, ರೋಬೊಟಿಕ್ಸ್, ವರ್ಚುವಲ್ ರಿಯಾಲಿಟಿ ತಂತ್ರಜ್ಞಾನಕ್ಕೆ ಒತ್ತು ನೀಡುವ ಮೂಲಕ ಯುವಜನರ ಸಬಲೀಕರಣಕ್ಕೆ ಆದ್ಯತೆ ನೀಡಲಾಗುವುದು’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.