ADVERTISEMENT

ಚುನಾವಣೆ ಮುಕ್ತಾಯ: ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ ₹15 ಹೆಚ್ಚಳ ಸಾಧ್ಯತೆ

ತಜ್ಞರ ಅಭಿಪ್ರಾಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಮಾರ್ಚ್ 2022, 5:37 IST
Last Updated 11 ಮಾರ್ಚ್ 2022, 5:37 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ದೇಶದಾದ್ಯಂತ ಪೆಟ್ರೋಲ್‌, ಡೀಸೆಲ್‌ ಬೆಲೆ ಪ್ರತಿ ಲೀಟರ್‌ಗೆ ₹15 ರಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಪೂರ್ವದಲ್ಲಿ ತೈಲ ಕಂಪನಿಗಳು ಇಂಧನ ದರದಲ್ಲಿ ಸ್ಥಿರತೆ ಕಾಪಾಡಿಕೊಂಡಿದ್ದರಿಂದಾಗಿ ನಷ್ಟಕ್ಕೆ ಗುರಿಯಾಗಿದ್ದವು. ರಷ್ಯಾ– ಉಕ್ರೇನ್‌ ಬಿಕ್ಕಟ್ಟಿನಿಂದಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಭಾರಿ ಏರಿಕೆ ಕಂಡಿದೆ. ಜತೆಗೆ, ತೈಲ ಅಮದು ಮತ್ತು ರಫ್ತು ಚಟುವಟಿಕೆಗಳ ಮೇಲೆ ದುಷ್ಪರಿಣಾಮ ಬೀರಿರುವುದರಿಂದ ಬೆಲೆ ಏರಿಕೆ ಮಾಡುವುದು ಅನಿವಾರ್ಯ ಎಂದು ತಜ್ಞರು ತಿಳಿಸಿದ್ದಾರೆ.

ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಕಂಡಿದ್ದು, ಒಂದು ಡಾಲರ್‌ಗೆ ₹ 76.43ಕ್ಕೆ ತಲುಪಿದೆ. ಬ್ರೆಂಟ್‌ ತೈಲ ದರ ಶೇ 4.91ರಷ್ಟು ಹೆಚ್ಚಾಗಿ ಒಂದು ಬ್ಯಾರಲ್‌ಗೆ 116.6 ಡಾಲರ್‌ ಆಗಿದೆ.

ADVERTISEMENT

ನಷ್ಟ ಸರಿದೂಗಿಸುವ ಉದ್ದೇಶದಿಂದ ಪೆಟ್ರೋಲ್, ಡೀಸೆಲ್‌ ದರ ಪ್ರತಿ ಲೀಟರ್‌ಗೆ ₹10ರಿಂದ ₹15.1ರಷ್ಟು ಹೆಚ್ಚಳ ಮಾಡುವ ನಿರೀಕ್ಷೆ ಇದೆ ಎಂದು ತಜ್ಞರು ತಿಳಿಸಿರುವುದಾಗಿ ವರದಿಯಾಗಿದೆ.

ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.