ADVERTISEMENT

ಆಸ್ತಿ ನಗದೀಕರಣದಿಂದ ₹1.42 ಲಕ್ಷ ಕೋಟಿ ಸಂಗ್ರಹ: ನಿತಿನ್ ಗಡ್ಕರಿ

ಪಿಟಿಐ
Published 21 ಆಗಸ್ಟ್ 2025, 15:41 IST
Last Updated 21 ಆಗಸ್ಟ್ 2025, 15:41 IST
ನಿತಿನ್ ಗಡ್ಕರಿ
ನಿತಿನ್ ಗಡ್ಕರಿ   

ನವದೆಹಲಿ: 2024–25ರ ಆರ್ಥಿಕ ವರ್ಷದವರೆಗೆ ವಿವಿಧ ಮಾದರಿಯ ಆಸ್ತಿಗಳ ನಗದೀಕರಣದಿಂದ ₹1.42 ಲಕ್ಷ ಕೋಟಿ ಸಂಗ್ರಹಿಸಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಲೋಕಸಭೆಗೆ ತಿಳಿಸಿದ್ದಾರೆ.

ಪ್ರಸಕ್ತ ಆರ್ಥಿಕ ವರ್ಷದಲ್ಲಿ ಆಸ್ತಿ ನಗದೀಕರಣದ ಮೂಲಕ ಸಂಗ್ರಹವಾಗುವ ಮೊತ್ತವು ₹30 ಸಾವಿರ ಕೋಟಿ ಆಗುವ ನಿರೀಕ್ಷೆ ಇದೆ ಎಂದು ಲಿಖಿತ ಉತ್ತರದಲ್ಲಿ ಗುರುವಾರ ತಿಳಿಸಿದ್ದಾರೆ.

ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರಿಗೆ ನಗದು ರಹಿತವಾಗಿ ಚಿಕಿತ್ಸೆ ನೀಡುವ ಯೋಜನೆಯನ್ನು 2024ರ ಮಾರ್ಚ್‌ನಲ್ಲಿ ಆರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜಾರಿ ಮಾಡಲಾಗಿತ್ತು. ಅಂದಿನಿಂದ ಪ್ರಸಕ್ತ ವರ್ಷದ ಜುಲೈ 31ರ ವರೆಗೆ ಈ ಯೋಜನೆಯಡಿ 4,971 ರಸ್ತೆ ಅಪಘಾತ ಸಂತ್ರಸ್ತರಿಗೆ ಚಿಕಿತ್ಸೆ ನೀಡಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಸಚಿವರು ಉತ್ತರಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.