ನವದೆಹಲಿ: ದೆಹಲಿ ವಿಮಾನ ನಿಲ್ದಾಣದಲ್ಲಿ ಶನಿವಾರ ದೇಶೀಯ ಮಾರ್ಗದಲ್ಲಿ ಹಾರಾಟ ನಿಗದಿಯಾಗಿದ್ದ 60 ವಿಮಾನಗಳ ಸಂಚಾರ ರದ್ದಾಗಿದೆ ಎಂದು ಮೂಲಗಳು ತಿಳಿಸಿವೆ.
ಭಾರತ ಮತ್ತು ಪಾಕಿಸ್ತಾನದ ನಡುವೆ ತಲೆದೋರಿರುವ ಉದ್ವಿಗ್ನತೆಯಿಂದಾಗಿ ಸುರಕ್ಷತೆ ದೃಷ್ಟಿಯಿಂದ ದೇಶದ 32 ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನು ಮೇ 15ರ ವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಹಾಗಾಗಿ, ವಿಮಾನಗಳ ಹಾರಾಟ ಸ್ಥಗಿತಗೊಂಡಿದೆ ಎಂದು ಹೇಳಿವೆ.
‘ವಿಮಾನ ನಿಲ್ದಾಣವು ಸಹಜ ಸ್ಥಿತಿಯಲ್ಲಿದೆ. ಆದರೆ, ನಾಗರಿಕ ವಿಮಾನಯಾನ ಭದ್ರತಾ ಬ್ಯೂರೊದ ಸೂಚನೆ ಮೇರೆಗೆ ಕೆಲವು ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ’ ಎಂದು ದೆಹಲಿ ಇಂಟರ್‌ನ್ಯಾಷನಲ್ ಏರ್‌ಪೋರ್ಟ್ ಲಿಮಿಟೆಡ್ (ಡಿಐಎಎಲ್) ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.