ADVERTISEMENT

8 ಕೋಟಿ ದಾಟಿದ ಅಟಲ್ ಪಿಂಚಣಿ ಯೋಜನೆ ಚಂದಾದಾರರು!

ಪಿಟಿಐ
Published 26 ಜುಲೈ 2025, 13:52 IST
Last Updated 26 ಜುಲೈ 2025, 13:52 IST
<div class="paragraphs"><p>ಅಟಲ್ ಪಿಂಚಣಿ ಯೋಜನೆ</p></div>

ಅಟಲ್ ಪಿಂಚಣಿ ಯೋಜನೆ

   

ನವದೆಹಲಿ: ಕೇಂದ್ರ ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆ ‘ಅಟಲ್ ಪಿಂಚಣಿ ಯೋಜನೆ’ಯಲ್ಲಿ (ಎಪಿವೈ) ನೋಂದಣಿ ಮಾಡಿಸಿಕೊಂಡವರ ಸಂಖ್ಯೆ ಎಂಟು ಕೋಟಿ ದಾಟಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.

ಪ್ರಸಕ್ತ ಆರ್ಥಿಕ ವರ್ಷದ ಇದುವರೆಗೆ ಹೊಸದಾಗಿ 39 ಲಕ್ಷ ಚಂದಾದಾರರು ಸೇರ್ಪಡೆಯಾಗಿದ್ದಾರೆ ಎಂದು ತಿಳಿಸಿದೆ. 

ADVERTISEMENT

ದೇಶದ ಎಲ್ಲರಿಗೂ ಸಾಮಾಜಿಕ ಭದ್ರತೆಯನ್ನು ಕಲ್ಪಿಸುವ ಉದ್ದೇಶದಿಂದ 2015ರ ಮೇ 9ರಂದು ಕೇಂದ್ರ ಸರ್ಕಾರ ಈ ಯೋಜನೆ ಆರಂಭಿಸಿತು. ಬಡವರು, ಅಸಂಘಟಿತ ವಲಯದಲ್ಲಿನ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶವನ್ನು ಈ ಯೋಜನೆ ಹೊಂದಿದೆ.

ಈ ಯೋಜನೆಯ ಅಡಿ ನೋಂದಾಯಿಸಿಕೊಂಡವರು ಕಟ್ಟುವ ಮೊತ್ತಕ್ಕೆ ಅನುಗುಣವಾಗಿ ಮಾಸಿಕ ₹1 ಸಾವಿರದಿಂದ ₹5 ಸಾವಿರವರೆಗೆ ಪಿಂಚಣಿ ಸಿಗುತ್ತದೆ. ಆದಾಯ ತೆರಿಗೆ ಪಾವತಿಸುವವರಿಗೆ ಈ ಯೋಜನೆ ಅನ್ವಯಿಸುವುದಿಲ್ಲ. ಪಿಂಚಣಿ ಮೊತ್ತವು 60 ವರ್ಷ ವಯಸ್ಸಾದ ನಂತರ ಸಿಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.