ADVERTISEMENT

ಭಾರತದಲ್ಲಿ ವಿದ್ಯುತ್‌ ಚಾಲಿತ ವಾಹನ ತಯಾರಿಕೆ: ಔಡಿ ಚಿಂತನೆ

ಪಿಟಿಐ
Published 6 ಫೆಬ್ರುವರಿ 2022, 11:31 IST
Last Updated 6 ಫೆಬ್ರುವರಿ 2022, 11:31 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ: ವಿದ್ಯುತ್‌ ಚಾಲಿತ ವಾಹನಗಳನ್ನು (ಇ.ವಿ.) ಭಾರತದಲ್ಲಿಯೇ ತಯಾರಿಸುವ ಸಾಧ್ಯತೆಯ ಮೌಲ್ಯಮಾಪನ ಮಾಡಲಾಗುತ್ತಿದೆ ಎಂದು ಔಡಿ ಇಂಡಿಯಾ ಕಂಪನಿಯ ಮುಖ್ಯಸ್ಥ ಬಲ್ಬೀರ್ ಸಿಂಗ್‌ ಧಿಲ್ಲೋನ್‌ ಹೇಳಿದ್ದಾರೆ.

ಕಂಪನಿಯು 2033ರಿಂದ ಜಾಗತಿಕವಾಗಿ ಸಂಪೂರ್ಣವಾಗಿ ವಿದ್ಯುತ್ ಚಾಲಿತ ವಾಹನಗಳನ್ನೇ ಮಾರುಕಟ್ಟೆಗೆ ಬಿಡುಗಡೆ ಮಾಡಲು ನಿರ್ಧರಿಸಿದ್ದು, ಸ್ಥಳೀಯ ತಯಾರಿಕೆಗೆ ಇದು ಸೂಕ್ತ ಸಮಯವಾಗಿದೆ.

ಕಳೆದ ಏಳು ತಿಂಗಳಿನಲ್ಲಿ ಕಂಪನಿಯು ಐದು ಇ.ವಿ. ಕಾರುಗಳನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ.

ADVERTISEMENT

ಸ್ಥಳೀಯವಾಗಿ ಬಿಡಿಭಾಗಗಳ ಜೋಡಣೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ‘ಸ್ಥಳೀಯವಾಗಿ ಕಾರುಗಳನ್ನು ತಯಾರಿಸಲು ಪ್ರಾರಂಭಿಸುವ ನಿರ್ಧಾರ ತೆಗೆದುಕೊಳ್ಳುವ ಮೊದಲು ಕೆಲವೊಂದು ಮೌಲ್ಯಮಾಪನ ಮಾಡುತ್ತಿದ್ದೇವೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.