ನವದೆಹಲಿ: ದೇಶದಲ್ಲಿ ವಾಹನಗಳ ಚಿಲ್ಲರೆ ಮಾರಾಟ ನವೆಂಬರ್ ತಿಂಗಳಲ್ಲಿ ಶೇ 11ರಷ್ಟು ಏರಿಕೆಯಾಗಿದೆ ಎಂದು ವಾಹನ ವಿತರಕರ ಸಂಘಟನೆಗಳ ಒಕ್ಕೂಟ (ಎಫ್‌ಎಡಿಎ) ಸೋಮವಾರ ತಿಳಿಸಿದೆ.
ಪ್ರಸಕ್ತ ವರ್ಷದ ನವೆಂಬರ್‌ನಲ್ಲಿ ಒಟ್ಟು 32.08 ಲಕ್ಷ ವಾಹನಗಳು ಮಾರಾಟವಾಗಿವೆ. ಹಿಂದಿನ ವರ್ಷದ ಇದೇ ತಿಂಗಳಲ್ಲಿ 28.85 ಲಕ್ಷ ವಾಹನಗಳು ಮಾರಾಟವಾಗಿದ್ದವು ಎಂದು ತಿಳಿಸಿದೆ.
ದ್ವಿಚಕ್ರ ವಾಹನಗಳ ಚಿಲ್ಲರೆ ಮಾರಾಟದಲ್ಲಿ ಶೇ 16ರಷ್ಟು ಏರಿಕೆಯಾಗಿದ್ದು, 26.15 ಲಕ್ಷ ಮಾರಾಟವಾಗಿವೆ. ಗ್ರಾಮೀಣ ಪ್ರದೇಶದಲ್ಲಿ ಬೇಡಿಕೆ ಹೆಚ್ಚಳವಾಗಿದ್ದರಿಂದ ದ್ವಿಚಕ್ರ ವಾಹನಗಳ ಮಾರಾಟದ ಪ್ರಮಾಣವು ಏರಿಕೆಯಾಗಿದೆ ಎಂದು ತಿಳಿಸಿದೆ.
ಪ್ರಯಾಣಿಕ ವಾಹನಗಳ ವಿಭಾಗದಲ್ಲಿ 3.21 ಲಕ್ಷ ವಾಹನಗಳು ಮಾರಾಟವಾಗಿದ್ದು, ಶೇ 13ರಷ್ಟು ಕಡಿಮೆಯಾಗಿದೆ. ವಾಣಿಜ್ಯ ವಾಹನಗಳ ಮಾರಾಟದಲ್ಲಿ ಶೇ 6ರಷ್ಟು ಕಡಿಮೆಯಾಗಿದ್ದು, 81,967 ವಾಹನಗಳು ಮಾರಾಟವಾಗಿವೆ. 1.08 ಲಕ್ಷ ತ್ರಿಚಕ್ರ ವಾಹನಗಳು ಮಾರಾಟವಾಗಿವೆ. ಕಳೆದ ವರ್ಷದ ನವೆಂಬರ್‌ನಲ್ಲಿ 1.03 ಲಕ್ಷ ವಾಹನಗಳು ಮಾರಾಟವಾಗಿದ್ದವು ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.