ADVERTISEMENT

ದೇಶದಲ್ಲಿ ವಾಹನಗಳ ಮಾರಾಟ ಹೆಚ್ಚಳ: ಎಫ್‌ಎಡಿಎ

ಪಿಟಿಐ
Published 5 ಮೇ 2025, 13:34 IST
Last Updated 5 ಮೇ 2025, 13:34 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ದೇಶದಲ್ಲಿ ವಾಹನಗಳ ಚಿಲ್ಲರೆ ಮಾರಾಟವು ಏಪ್ರಿಲ್‌ ತಿಂಗಳಲ್ಲಿ ಶೇ 3ರಷ್ಟು ಏರಿಕೆಯಾಗಿದೆ ಎಂದು ವಾಹನ ವಿತರಕರ ಸಂಘಟನೆಗಳ ಒಕ್ಕೂಟ (ಎಫ್‌ಎಡಿಎ) ಸೋಮವಾರ ತಿಳಿಸಿದೆ.

2024ರ ಏಪ್ರಿಲ್‌ನಲ್ಲಿ 22.22 ಲಕ್ಷ ವಾಹನಗಳು ಮಾರಾಟವಾಗಿದ್ದವು. ಈ ಏಪ್ರಿಲ್‌ನಲ್ಲಿ 22.87 ಲಕ್ಷ ವಾಹನಗಳು ಮಾರಾಟವಾಗಿವೆ. ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಶೇ 2ರಷ್ಟು ಏರಿಕೆಯಾಗಿದೆ. ತ್ರಿಚಕ್ರ ವಾಹನಗಳು (ಶೇ 24), ಪ್ರಯಾಣಿಕ ವಾಹನಗಳು (ಶೇ 1.5) ಮತ್ತು ಟ್ರ್ಯಾಕ್ಟರ್‌ಗಳ ಮಾರಾಟದಲ್ಲಿ ಶೇ 7ರಷ್ಟು ಹೆಚ್ಚಳವಾಗಿದೆ. ಆದರೆ, ವಾಣಿಜ್ಯ ವಾಹನಗಳ ಮಾರಾಟದಲ್ಲಿ ಶೇ 1ರಷ್ಟು ಇಳಿಕೆಯಾಗಿದೆ ಎಂದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT