ಮುಂಬೈ: ಪ್ರಯಾಣಿಕರಿಗೆ ಸಕಾಲದಲ್ಲಿ ಪರಿಹಾರ ಮೊತ್ತ ವಿತರಿಸುವಲ್ಲಿ ಲೋಪ ಎಸಗಿದ ಆರೋಪದ ಮೇರೆಗೆ ಆಕಾಸಾ ಏರ್ ವಿಮಾನಯಾನ ಕಂಪನಿಗೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯವು (ಡಿಜಿಸಿಎ) ₹10 ಲಕ್ಷ ದಂಡ ವಿಧಿಸಿದೆ.
ಸೆಪ್ಟೆಂಬರ್ 6ರಂದು ಏಳು ಪ್ರಯಾಣಿಕರು ಬೆಂಗಳೂರಿನಿಂದ ಪುಣೆಗೆ ಟಿಕೆಟ್ ಬುಕಿಂಗ್ ಮಾಡಿದ್ದರು. ಸೀಟುಗಳ ಬದಲಾವಣೆ ಹಾಗೂ ಕೆಲವು ತಾಂತ್ರಿಕ ಕಾರಣದ ನೆಪವೊಡ್ಡಿ ಈ ಪ್ರಯಾಣಿಕರ ಸಂಚಾರಕ್ಕೆ ಕಂಪನಿಯು ಅನುಮತಿ ನಿರಾಕರಿಸಿತ್ತು.
ಬಳಿಕ ನಿಗದಿತ ಸಮಯಕ್ಕಿಂತ ಒಂದು ಗಂಟೆ ತಡವಾಗಿ ಈ ಪ್ರಯಾಣಿಕರು ಇಂಡಿಗೊ ವಿಮಾನದಲ್ಲಿ ಪ್ರಯಾಣಿಸಿದ್ದರು. ಆದರೆ, ಅವರಿಗೆ ಪರಿಹಾರ ಮೊತ್ತ ವಿತರಿಸಿರಲಿಲ್ಲ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.