ADVERTISEMENT

Axis Bank Profit: ಎಕ್ಸಿಸ್‌ ಬ್ಯಾಂಕ್‌ಗೆ ₹6,490 ಕೋಟಿ ಲಾಭ

​ಪ್ರಜಾವಾಣಿ ವಾರ್ತೆ
Published 26 ಜನವರಿ 2026, 14:30 IST
Last Updated 26 ಜನವರಿ 2026, 14:30 IST
   

ಬೆಂಗಳೂರು: ಡಿಸೆಂಬರ್ ತ್ರೈಮಾಸಿಕದಲ್ಲಿ ಖಾಸಗಿ ವಲಯದ ಎಕ್ಸಿಸ್‌ ಬ್ಯಾಂಕ್‌ನ ನಿವ್ವಳ ಲಾಭದಲ್ಲಿ ಶೇ 3ರಷ್ಟು ಹೆಚ್ಚಳವಾಗಿದೆ.

ಕಳೆದ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ಬ್ಯಾಂಕ್ ₹6,304 ಕೋಟಿ ಲಾಭ ಗಳಿಸಿತ್ತು. ಅದು ಈ ಬಾರಿ ₹6,490 ಕೋಟಿಗೆ ಹೆಚ್ಚಳವಾಗಿದೆ ಎಂದು ಬ್ಯಾಂಕ್‌ ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದೆ.

ನಿವ್ವಳ ಬಡ್ಡಿ ವರಮಾನದಲ್ಲಿ ಶೇ 5ರಷ್ಟು ಏರಿಕೆಯಾಗಿದ್ದು, ₹14,287 ಕೋಟಿಯಷ್ಟಾಗಿದೆ. ಬ್ಯಾಂಕ್‌ನ ಒಟ್ಟು ಠೇವಣಿ ₹12.60 ಲಕ್ಷ ಕೋಟಿಯಾಗಿದೆ.

ADVERTISEMENT

ಒಟ್ಟು ವಸೂಲಾಗದ ಸಾಲದ ಪ್ರಮಾಣ (ಜಿಎನ್‌ಪಿಎ) ಶೇ 1.46ರಿಂದ ಶೇ 1.40ಕ್ಕೆ ಇಳಿದಿದೆ. ನಿವ್ವಳ ಎನ್‌ಪಿಎ ಶೇ 0.44ರಿಂದ ಶೇ 0.42ಕ್ಕೆ ಇಳಿದಿದೆ ಎಂದು ತಿಳಿಸಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.