ನವದೆಹಲಿ: ಪ್ರಸಕ್ತ ಆರ್ಥಿಕ ವರ್ಷದ ಅಂತ್ಯದೊಳಗೆ ಇ–ರಿಕ್ಷಾಗಳನ್ನು ಮಾರುಕಟ್ಟೆಗೆ ಪರಿಚಯಿಸಲು ಬಜಾಜ್ ಆಟೊ ಕಂಪನಿಯು ಸಜ್ಜಾಗುತ್ತಿದೆ.
ಮಾರ್ಚ್ ತ್ರೈಮಾಸಿಕದ ಅಂತ್ಯದೊಳಗೆ ಇದಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ಅನುಮತಿ ಪಡೆಯಲು ನಿರ್ಧರಿಸಲಾಗಿದೆ. ಮಾಸಿಕವಾಗಿ 45 ಸಾವಿರ ಇ–ರಿಕ್ಷಾಗಳನ್ನು ತಯಾರಿಸುವ ಗುರಿ ಹೊಂದಲಾಗಿದೆ ಎಂದು ಕಂಪನಿಯ ಕಾರ್ಯ ನಿರ್ವಾಹಕ ನಿರ್ದೇಶಕ ರಾಕೇಶ್ ಶರ್ಮಾ ತಿಳಿಸಿದ್ದಾರೆ.
ದೇಶದಲ್ಲಿ ಇ–ರಿಕ್ಷಾ ವಲಯವು ವೇಗವಾಗಿ ಬೆಳೆಯುತ್ತಿದ್ದು, ದೊಡ್ಡ ಅವಕಾಶವೂ ಇದೆ. ಆದರೆ, ಇದು ಅಸಂಘಟಿತ ಮಾರುಕಟ್ಟೆಯಾಗಿದೆ ಎಂದು ಹೇಳಿದ್ದಾರೆ.
ಮಾರ್ಚ್ ಅಂತ್ಯಕ್ಕೆ ಅಥವಾ ಏಪ್ರಿಲ್ ಮೊದಲ ವಾರದಲ್ಲಿ ಆಧುನಿಕ ಸೌಲಭ್ಯ ಹೊಂದಿರುವ ಈ ರಿಕ್ಷಾಗಳು ಖರೀದಿಗೆ ಲಭ್ಯ ಇರಲಿವೆ. ಮಾಲೀಕರು ಮತ್ತು ಪ್ರಯಾಣಿಕರಿಗೆ ತೃಪ್ತಿಕರವಾದ ಸೇವೆ ಒದಗಿಸುವಂತಹ ರಿಕ್ಷಾಗಳನ್ನು ತಯಾರಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.